Saturday, June 28, 2025
spot_imgspot_img
spot_imgspot_img

ಭಾರತೀಯ ನೌಕಾಪಡೆ ಜಲಾಂತರ್ಗಾಮಿಗೆ ಮೀನುಗಾರಿಕಾ ಹಡಗು ಡಿಕ್ಕಿ; ಇಬ್ಬರು ಮೀನುಗಾರರು ನಾಪತ್ತೆ..!

- Advertisement -
- Advertisement -

ದೆಹಲಿ: ಭಾರತೀಯ ಮೀನುಗಾರಿಕಾ ಹಡಗು ಗೋವಾ ಕರಾವಳಿಯ ಬಳಿ ಭಾರತೀಯ ನೌಕಾಪಡೆ ಜಲಾಂತರ್ಗಾಮಿ ನೌಕೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ 13 ಮೀನುಗಾರರ ಪೈಕಿ ಇಬ್ಬರು ನಾಪತ್ತೆಯಾಗಿದ್ದು, ಉಳಿದ 11 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಪತ್ತೆಯಾದ ಮೀನುಗಾರರನ್ನು ಪತ್ತೆಮಾಡಲು ಭಾರತೀಯ ನೌಕಾಪಡೆಯು ಆರು ಹಡಗುಗಳು ಮತ್ತು ವಿಮಾನಗಳನ್ನು ನಿಯೋಜಿಸಿದ್ದು, ಬೃಹತ್ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಗೋವಾ ಕರಾವಳಿಯಿಂದ 70 ನಾಟಿಕಲ್ ಮೈಲು ದೂರದಲ್ಲಿ ಸ್ಕಾರ್ಪೀನ್ ದರ್ಜೆಯ ಜಲಾಂತರ್ಗಾಮಿ ನೌಕೆಗೆ ಮಾರ್ಥೋಮಾ ಡಿಕ್ಕಿ ಹೊಡೆದಿದೆ ಎಂದು ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ.

ಉಳಿದ ಇಬ್ಬರಿಗಾಗಿ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿವೆ. ಮಾರಿಟೈಮ್ ಪಾರುಗಾಣಿಕಾ ಸಮನ್ವಯ ಕೇಂದ್ರ ಮುಂಬೈ (ಎಂಆರ್‌ಸಿಸಿ)ನೊಂದಿಗೆ ಸಮನ್ವಯಗೊಳಿಸಲಾಗುತ್ತಿದೆ. ಘಟನೆಗೆ ಕಾರಣವೇನು ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!