Monday, April 29, 2024
spot_imgspot_img
spot_imgspot_img

ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತ್ಯು

- Advertisement -G L Acharya panikkar
- Advertisement -

ಮಣ್ಣು ತುಂಬಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನಲ್ಲಿ ಸಂಭವಿಸಿದೆ.

ಮೃತರನ್ನು ಬೀಳಗಿ ತಾಲೂಕು ಬಾದರದಿನ್ನಿ ಗ್ರಾಮದ ಯಂಕಪ್ಪ ಶಿವಪ್ಪ ತೋಳಮಟ್ಟಿ (72), ಪತ್ನಿ ಯಲ್ಲವ್ವ ಯಂಕಪ್ಪ ತೋಳಮಟ್ಟಿ (66), ಪುತ್ರ ಪುಂಡಲೀಕ ಯಂಕಪ್ಪ ತೋಳಮಟ್ಟಿ (40), ಪುತ್ರಿ ನಾಗವ್ವ ಅಶೋಕ ಬಮ್ಮನ್ನವರ, ಅಶೋಕ ನಿಂಗಪ್ಪ ಬಮ್ಮನ್ನವರ (48) ಎಂದು ಗುರುತಿಸಲಾಗಿದೆ.

ಯಂಕಪ್ಪ ತೋಳಮಟ್ಟಿ ಅವರ ಮಗಳು, ಅಳಿಯ ಸಹಿತ ಐವರೂ, ಹೊಲದಲ್ಲಿ ಕೆಲಸ ಮುಗಿಸಿಕೊಂಡು, ಮರಳಿ ತಮ್ಮೂರು ಬಾದರದಿನ್ನಿಗೆ ತೆರಳಲು ಯತ್ನಟ್ಟಿ ಕ್ರಾಸ್ ಬಳಿ ರಸ್ತೆಯ ಪಕ್ಕದಲ್ಲಿ ನಿಂತಿದ್ದು, ಈ ಸಂದರ್ಭ ಮಣ್ಣು ತುಂಬಿಕೊಂಡು ವೇಗವಾಗಿ ಬರುತ್ತಿದ್ದ ಟಿಪ್ಪರ್ ವಾಹನದ ಟಯರ್ ಸ್ಪೋಟಗೊಂಡು, ರಸ್ತೆ ಪಕ್ಕದಲ್ಲಿ ನಿಂತಿದ್ದ ಐವರ ಮೇಲೆ ಪಲ್ಟಿಯಾಗಿದೆ.

- Advertisement -

Related news

error: Content is protected !!