Thursday, June 4, 2026
spot_imgspot_img
spot_imgspot_img

ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು : ಚಾಲಕ ಪ್ರಾಣಾಪಾಯದಿಂದ ಪಾರು

- Advertisement -
- Advertisement -

ಕಾರಿನ ಎಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಕಾರಿನ ತುಂಬಾ ವ್ಯಾಪಿಸಿ ರಸ್ತೆಯಲ್ಲಿ ಕಾರು ಹೊತ್ತಿ ಉರಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಗೋಪಸಂದ್ರ ಗೇಟ್ ಬಳಿ ನಡೆದಿದೆ.

ರಸ್ತೆಯಲ್ಲಿ ಕಾರು ಚಲಿಸುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲ ಹೊತ್ತಿನಲ್ಲೇ ಬೆಂಕಿ ಕಾರಿನ ಕೆಲವು ಭಾಗಗಳನ್ನು ಆವರಿಸಿ, ಕಾರಿನಲ್ಲಿದ್ದ ಚಾಲಕ ಕೂಡಲೇ ಕೆಳಗೆ ಇಳಿದಿದ್ದಾನೆ. ಅದೃಷ್ಟವಶಾತ್ ಕಾರಿನ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯಿಂದಾಗಿ ದೊಮ್ಮಸಂದ್ರ ರಸ್ತೆ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗಿತ್ತು. ಇದನ್ನು ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಸೂರ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮುಂದುವರಿಸಿದ್ದಾರೆ

- Advertisement -

Related news

error: Content is protected !!