Saturday, June 28, 2025
spot_imgspot_img
spot_imgspot_img

ವಿಮಾನ ಟೇಕಾಫ್ ವೇಳೆ ತಾಂತ್ರಿಕ ದೋಷ-ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!!

- Advertisement -
- Advertisement -

ಬೆಂಗಳೂರು(ನ.5): ವಿಮಾನವೊಂದರ ಟೇಕಾಫ್ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು. ಪೈಲಟ್ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಲುಫ್ತಾನ್ಸಾ ಏರ್ ಲೈನ್ಸ್ ವಿಮಾನ ಟೇಕಾಫ್ ವೇಳೆ ಈ ತಾಂತ್ರಿಕ ದೋಷ ಕಂಡುಬಂದಿದ್ದು. ವಿಮಾನದ ಮುಂದಿನ ವ್ಹೀಲ್ ನಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ತಕ್ಷಣ ಅಧಿಕಾರಿಗಳು ಎಮರ್ಜೆನ್ಸಿ ಘೋಷಿಸಿದ್ದಾರೆ.

ಒಂದು ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ವಿಮಾನ ಹಾರಾಟ ನಡೆಸಿದೆ. ಪೈಲಟ್ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ. ಇಂಧನ ಖಾಲಿಯಾದ ಬಳಿಕ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ. ವಿಮಾನದಲ್ಲಿ ಒಟ್ಟು 78 ಪ್ರಯಾಣಿಕರಿದ್ದರು.

- Advertisement -

Related news

error: Content is protected !!