- Advertisement -
- Advertisement -
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಏರುತ್ತಲೇ ಇದೆ. ಹೀಗಾಗಿ ಕೊರೊನಾ ನಿಯಂತ್ರಣ ಮಾಡಲು ಸರ್ಕಾರ ಇನ್ನಿಲ್ಲದ ಹರಸಾಹಸ ಮಾಡುತ್ತಿದೆ. ಇದೀಗ ಕೊರೊನಾ ಸೋಂಕಿತರನ್ನು ಗುಣಮುಖಮಾಡಲು ಸರ್ಕಾರ ಹೊಸ ಪ್ಲಾನ್ ಮಾಡಿದೆ. ಗುಣಮುಖರಾದ ಕೊರೊನಾ ಸೋಂಕಿತರು ತಮ್ಮ ಪ್ಲಾಸ್ಮಾ ದಾನ ಮಾಡಿದ್ರೆ ಸರ್ಕಾರ 5 ಸಾವಿರ ರೂ. ಗೌರವ ಧನ ನೀಡುತ್ತದೆ ಎಂದು ಘೋಷಣೆ ಮಾಡಿದೆ.
ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದು, ಕೊರೊನಾದಿಂದ ಗುಣಮುಖರಾದ ಸೋಂಕಿತರಲ್ಲಿ ಇಮ್ಯುನಿಟಿ ಪವರ್ ಹೆಚ್ಚಾಗಿರುತ್ತದೆ. ಹೀಗಾಗಿ ಗುಣಮುಖರಾದವರು ತಮ್ಮ ಪ್ಲಾಸ್ಮಾ ದಾನ ಮಾಡಿದ್ರೆ ಸರ್ಕಾರ 5 ಸಾವಿರ ರೂ.ಗೌರವ ಧನ ನೀಡಲಿದೆ ಎಂದು ತಿಳಿಸಿದ್ದಾರೆ.
- Advertisement -