Wednesday, July 22, 2026
spot_imgspot_img
spot_imgspot_img

ರಾಹುಲ್-ಸೋನಿಯಾ ಪ್ರಯಾಣಿಸುತ್ತಿದ್ದ ವಿಮಾನತುರ್ತು ಭೂಸ್ಪರ್ಶ

- Advertisement -
- Advertisement -

ಪ್ರತಿಕೂಲ ಹವಾಮಾನದಿಂದ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನವು ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಮಂಗಳವಾರ ಸಂಜೆ ತುರ್ತು ಭೂಸ್ಪರ್ಶ ಮಾಡಿದೆ ಎಂದು ಭೋಪಾಲ್ ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಬೆಳಗ್ಗೆ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ವಿರೋಧ ಪಕ್ಷದ ಸಭೆಯಲ್ಲಿ ಭಾಗವಹಿಸಿ ಸೋನಿಯಾ ಮತ್ತು ರಾಹುಲ್ ದೆಹಲಿಗೆ ವಾಪಾಸಾಗುತ್ತಿದ್ದಾಗ ಈ ಘಟನೆ ನಡೆದಿದೆ.

ಸೋನಿಯಾ ಮತ್ತು ರಾಹುಲ್ ದೆಹಲಿಗೆ ಭೋಪಾಲ್ ವಿಮಾನ ನಿಲ್ದಾಣದಿಂದ ರಾತ್ರಿ 9.30 ರ ಸುಮಾರಿಗೆ ಇಂಡಿಗೋ ವಿಮಾನದಲ್ಲಿ ಪ್ರಯಾಣ ಬೆಳೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

- Advertisement -

Related news

error: Content is protected !!