Sunday, July 6, 2025
spot_imgspot_img
spot_imgspot_img

ಉಡುಪಿ: ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕ‌ರ್ ಪಲ್ಟಿ

- Advertisement -
- Advertisement -

ಉಡುಪಿ: ಉಡುಪಿ ಕಿನ್ನಿಮೂಲ್ಕಿ ಸಮೀಪ ರಾ.ಹೆ. 66ರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕ‌ರ್ ವೊಂದು ಪಲ್ಟಿಯಾದ ಘಟನೆ ಶುಕ್ರವಾರ ನಡೆದಿದೆ.

ಗುಜರಾತ್ ನಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಟ್ಯಾಂಕ‌ರ್ ಕಿನ್ನಿಮೂಲ್ಕಿ ಸಮೀಪ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ ಎಂದು ತಿಳಿದು ಬಂದಿದೆ.ಚಾಲಕ ಹಾಗೂ ಕ್ಲೀನ‌ರ್ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ಕೆಲಕಾಲ ಹೆದ್ದಾರಿ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ಮೂಲಕ ಟ್ಯಾಂಕರನ್ನು ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದರು ಎಂದು ತಿಳಿದು ಬಂದಿದೆ.ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆಯಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!