Saturday, June 13, 2026
spot_imgspot_img
spot_imgspot_img

ಪುತ್ತೂರು: ಭಾರೀ ಮಳೆಗೆ ಧರೆ ಕುಸಿತ :ಮಣ್ಣಿನಡಿ ಸಿಲುಕಿದ ಮಕ್ಕಳು| ಪವಾಡ ಸದೃಶ ತಪ್ಪಿದ ಭಾರೀ ದುರಂತ

- Advertisement -
- Advertisement -

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಘಟನೆ ನಡೆದಿದೆ. ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಜೂ.27 ರ ನಸುಕಿನ ಜಾವ ನಡೆದಿದೆ.

ಗೋಡೆ ಕುಸಿದ ಬೆನ್ನಲ್ಲೇ ಇಬ್ಬರು ಮಕ್ಕಳನ್ನ ಮನೆಯವರು ಪಾರು ಮಾಡಿದ್ದಾರೆ. ಮಣ್ಣು ಬಿದ್ದ ಪರಿಣಾಮ ಮನೆಯ ಅರ್ಧ ಭಾಗ ಕುಸಿದು ಹಾನಿ ಉಂಟಾಗಿದೆ. ಮಜೀದ್ ಮತ್ತು ಇಬ್ಬರು ಮಲಗಿದ್ದ ಕೊಠಡಿ ಮೇಲೆ ಮಣ್ಣು ಬಿದ್ದಿತ್ತು.
ತಕ್ಷಣ ಎಚ್ಚೆತ್ತು ಮಣ್ಣಿನಡಿ ಇದ್ದ ಇಬ್ಬರು ಮಕ್ಕಳನ್ನ ತಂದೆ ಮಜೀದ್ ಪಾರು ಮಾಡಿದ್ದಾರೆ.ಅದೃಷ್ಟವಶಾತ್ ಮಣ್ಣಿನಡಿ ಸಿಲುಕಿದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮನೆ ಪಕ್ಕದ ಧರೆಯೊಂದು ಸಡಿಲಗೊಂಡು ಮನೆ ಮೇಲೆ ಬಿದ್ದು ಹಾನಿ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪುತ್ತೂರು ನಗರಸಭಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರಸಭೆ ಮತ್ತು ಸ್ಥಳೀಯರಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಸಿದ್ದಾರೆ.

- Advertisement -

Related news

error: Content is protected !!