Thursday, June 18, 2026
spot_imgspot_img
spot_imgspot_img

ಫುಡ್ ಡೆಲಿವರಿ ಬಾಯ್ ಮೇಲೆ ರೆಸ್ಟೋರೆಂಟ್ ಸಿಬ್ಬಂದಿಯಿಂದ ಹಲ್ಲೆ..!

- Advertisement -
- Advertisement -

ಬೆಂಗಳೂರು: ರೆಸ್ಟೋರೆಂಟ್ ಸಿಬ್ಬಂದಿ ಬಳಿ ಪಾರ್ಸೆಲ್ ಕೊಟ್ಟಿಲ್ಲ ಎಂದು ಪ್ರಶ್ನೆ ಮಾಡಿದ್ದ ಫುಡ್ ಡೆಲಿವರಿ ಬಾಯ್ ಮೇಲೆ ಹಲ್ಲೆ ನಡೆಸಿದ ಘಟನೆ ಹೆಸರಘಟ್ಟ ರಸ್ತೆಯ ಗಬ್ರು ಬ್ರಿಸ್ಟೋ ಆ್ಯಂಡ್ ಕೆಫೆ ರೆಸ್ಟೋರೆಂಟ್‌ನಲ್ಲಿ ನಡೆದಿದೆ.

ಡೆಲಿವರಿ ಬಾಯ್‌ಯೊಬ್ಬ ರೆಸ್ಟೋರೆಂಟ್‌ನಿಂದ ಫುಡ್ ಪಡೆದು ಡೆಲಿವರಿ ಮಾಡಬೇಕಿತ್ತು. ಆದರೆ ಅರ್ಧ ಗಂಟೆಯಾದರೂ ರೆಸ್ಟೋರೆಂಟ್ ಸಿಬ್ಬಂದಿ ಪಾರ್ಸೆಲ್ ಕೊಟ್ಟಿರಲಿಲ್ಲ. ಇದನ್ನು ಪ್ರಶ್ನಿಸಿದ್ದ ಡೆಲಿವರಿ ಬಾಯ್‌ಗೆ ರೆಸ್ಟೋರೆಂಟ್ ಸಿಬ್ಬಂದಿ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಹಲ್ಲೆಗೊಳಗಾದ ಡೆಲಿವರಿ ಬಾಯ್ ಯಾರು ಎಂಬ ಮಾಹಿತಿ ತಿಳಿದುಬಂದಿಲ್ಲ. ಹಲ್ಲೆ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರೋಪಿಗಳನ್ನು ಬಂಧಿಸುವಂತೆ ಸಾರ್ವಜನಿಕರು ಎಕ್ಸ್‌ನಲ್ಲಿ ಪೋಸ್ಟ್ ಹಾಕಿ ಆಗ್ರಹಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Related news

error: Content is protected !!