Saturday, August 22, 2026
spot_imgspot_img
spot_imgspot_img

ಕರ್ನಾಟಕದಲ್ಲಿ ಕೃತಕ ಪನ್ನೀರ್ 1 ವರ್ಷ ಬ್ಯಾನ್ ಮಾಡಿ ಆಹಾರ ಇಲಾಖೆ ಆದೇಶ

- Advertisement -
- Advertisement -

ಬೆಂಗಳೂರು: ಕರ್ನಾಟಕದಲ್ಲಿ 1 ವರ್ಷದ ಅವಧಿಗೆ ಕೃತಕ ಪನ್ನೀರ್‌ ಬ್ಯಾನ್‌ ಮಾಡಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯಾದ್ಯಂತ ಪನ್ನೀರ್‌ ಹೆಸರಿನಲ್ಲಿ ಅನಲಾಗ್ ಪನ್ನೀರ್ ತಯಾರಿಕೆ, ಸಂಗ್ರಹಣೆ , ಮಾರಾಟವಾಗುತ್ತಿದೆ. ಕೃತಕ‌ ಪನ್ನೀರ್ ನಿಷೇಧ ಮಾಡಿ ಆದೇಶಿಸಲಾಗಿದೆ.

ಕರ್ನಾಟಕವು ಹಲವಾರು ಪನ್ನೀರ್‌ ಮಾದರಿಗಳನ್ನು ಪರೀಕ್ಷಿಸಿದ್ದು, ಯಾವುದೇ ಕಲಬೆರಕೆ ಇಲ್ಲ ಎಂದು ಕಂಡುಬಂದಿದೆ. ಪನ್ನೀರ್‌ನಲ್ಲಿ ಸಸ್ಯಜನ್ಯ ಎಣ್ಣೆ, ಕೊಬ್ಬು ಅಥವಾ ಇತರೆ ಡೈರಿ ಪದಾರ್ಥಗಳೊಂದಿಗೆ ಕಲಬೆರಕೆ ಇಲ್ಲದಿದ್ದರೂ, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕೃತಕ ಪನ್ನೀರ್‌ ಬಳಸಬಾರದು ಎಂದು ನಿಷೇಧ ಹೇರಲಾಗಿದೆ.

ಈ ನಿಷೇಧವು ನಿರ್ದಿಷ್ಟ ಗುಣಮಟ್ಟದ ಮಾನದಂಡಗಳನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ನಿಗದಿಪಡಿಸಿದ ಮತ್ತು ಪ್ರಮಾಣೀಕರಿಸಿದ ಡೈರಿ ಕೃತಕ ಉತ್ಪನ್ನಗಳಿಗೆ ಮಾತ್ರ ಅನ್ವಯಿಸುತ್ತದೆ.

ಅನಲಾಗ್‌/ನಾನ್‌-ಡೈರಿ ಪನ್ನೀರ್‌ ಅನ್ನು ಯಾವುದೇ ಆಹಾರ ಉತ್ಪನ್ನ ಅಥವಾ ಆಹಾರ ಪದಾರ್ಥದ ತಯಾರಿಕೆಯಲ್ಲಿ ಬಳಸುವುದು, ಸಂಗ್ರಹಿಸುವುದು, ಪೂರೈಸುವುದು, ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

- Advertisement -

Related news

error: Content is protected !!