Thursday, July 23, 2026
spot_imgspot_img
spot_imgspot_img

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಾಲು ಸಂಕ – 8 ಮಂದಿಗೆ ಗಾಯ

- Advertisement -
- Advertisement -

ಮಂಗಳೂರು: ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಕುಸಿದು ಬಿದ್ದು 8 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲು ಎಂಬಲ್ಲಿ ನಡೆದಿದೆ.

ದೈವದ ಭಂಡಾರವನ್ನು ತಾಕೋಡೆ ಬರ್ಕೆ ಧರ್ಮನೇಮಕ್ಕೆ ಕೊಂಡೊಯ್ಯುತ್ತಿದ್ದರು. ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆ ಸಾಗುತ್ತಿದ್ದಾಗ ಕಾಲು ಸಂಕ ಏಕಾಏಕಿ ಕುಸಿದು ಪಲ್ಲಕ್ಕಿ ಉರುಳಿ ಬಿದ್ದು ಅವಘಡ ಸಂಭವಿಸಿದೆ. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಂಬು, ಕಹಳೆ, ಬ್ಯಾಂಡ್ ವಾದ್ಯಗಳೊಂದಿಗೆ ಮೆರವಣಿಗೆ ಸಾಗುತ್ತಿತ್ತು. ಕಾಲು ಸಂಕದ ಮೇಲೆ ಬಂದಾಗ ಏಕಾಏಕಿ ಮುರಿದು ಬಿದ್ದಿದೆ.

ಅವಘಡದಲ್ಲಿ ಸುನಿಲ್ ಶೆಟ್ಟಿ ಮುಕಾಲ್ದಿ ಮಾರೂರು, ಲೋಕೇಶ್ ಭಂಡಾರಿ ಸೇರಿದಂತೆ ಪಲ್ಲಕ್ಕಿ ಹೊತ್ತವರನ್ನೂ ಒಳಗೊಂಡು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ಕಾಲು ಸಂಕ ಮುರಿದು ಕಲ್ಲಿನ ಬೀಮ್ ಪಲ್ಲಕ್ಕಿ ಹೊತ್ತವರ ಮೇಲೆ ಬಿದ್ದ ಪರಿಣಾಮ ಗಾಯಗಳಾಗಿದೆ. ಪಲ್ಲಕ್ಕಿಯಲ್ಲಿದ್ದ ದೈವದ ಮೊಗಮೂರ್ತಿ ಹಾಗೂ ಇತರ ಧಾರ್ಮಿಕ ಪರಿಕರಗಳಿಗೆ ಹಾನಿಯಾಗಿದೆ.

- Advertisement -

Related news

error: Content is protected !!