


ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಸಾಮಾನ್ಯವಾಗಿ ಪ್ರತಿ ವರ್ಷ 10 ದಿನಗಳ ಕಾಲ ನಡೆಯುತ್ತದೆ. ಆದರೆ ಈ ಬಾರಿ 11 ದಿನಗಳ ಕಾಲ ದಸರಾ ಮಹೋತ್ಸವ ನಡೆಯಲಿದೆ.
ಈ ಬಾರಿ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ದಸರಾ ಆಚರಣೆ ಮಾಡಲಾಗುತ್ತದೆ. ಸೆಪ್ಟಂಬರ್ 26, ಸೆ.27 ಎರಡೂ ದಿನ ಪಂಚಮಿ ಆಗಮನವಿದ್ದು, ಹೀಗಾಗಿ ಈ ಬಾರಿ 11 ದಿನ ದಸರಾ ಆಚರಣೆ ಇರಲಿದೆ. ಇದು ಇತಿಹಾಸದಲ್ಲೇ ಕಂಡು ಕೇಳರಿಯದ ರೀತಿಯ ದಸರಾ ಮಹೋತ್ಸವ ಆಗಿದ್ದು, ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸದಲ್ಲೇ ಈ ರೀತಿ 11 ದಿನಗಳ ಕಾಲ ದಸರಾ ಆಚರಣೆ ಮಾಡುತ್ತಿರುವುದು.
ನವರಾತ್ರಿಯ ಮರುದಿನ ವಿಜಯದಶಮಿ ಆಚರಿಸುವುದು ಸಂಪ್ರದಾಯ. ವಿಜಯದಶಮಿಯಂದು ಅರಮನೆಯಲ್ಲಿ ಪೂಜೆ ಪುನಸ್ಕಾರಗಳು ನಡೆದರೇ ಸರ್ಕಾರದ ವತಿಯಿಂದ ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ.
ಸಾಮಾನ್ಯವಾಗಿ ಪ್ರತಿ ವರ್ಷ 10 ದಿನಗಳ ಕಾಲ ದಸರಾ ನಡೆಯುತ್ತದೆ. ದಸರಾ ಪರಂಪರೆ ಶುರುವಾಗಿ 410 ವರ್ಷ ಕಳೆದಿದೆ. 410 ವರ್ಷಗಳಿಂದಲೂ 10 ದಿನ ದಸರಾ ನಡೆದಿದೆ. ಆದರೆ ಈ ಬಾರಿ 11 ದಿನ ದಸರಾ ನಡೆಯುವ ಮೂಲಕ ಹೊಸ ದಾಖಲೆ ಸೃಷ್ಟಿ ಆಗಲಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ದಿನಗಳ ಬಗ್ಗೆ ಧಾರ್ಮಿಕವಾಗಿ ಚರ್ಚೆಗಳು ಶುರುವಾಗಿವೆ. 1410 ರಿಂದ ಮೈಸೂರು ಸಂಸ್ಥಾನದ ಆಳ್ವಿಕೆಯಲ್ಲಿ ದಸರಾ ಆಚರಣೆ ನಡೆದಿದ್ದು 11 ದಿನ ದಸರಾ ನಡೆದ ಉದಾಹರಣೆಗಳಿಲ್ಲ. ಮಹಾಲಯ ಅಮಾವಾಸ್ಯೆಯ ಮರು ದಿನದಿಂದ ನವರಾತ್ರಿ ಶುರುವಾಗಿ 9 ದಿನಗಳ ಮರುದಿನ ವಿಜಯದಶಮಿ ಆಚರಿಸುವುದು ಸಂಪ್ರದಾಯ. ವಿಜಯದಶಮಿಯಂದು ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ.