Thursday, June 18, 2026
spot_imgspot_img
spot_imgspot_img

ಅರಣ್ಯಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ..!

- Advertisement -
- Advertisement -

ಯುವ ಅರಣ್ಯಾಧಿಕಾರಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿಯ ಅರಣ್ಯ ಇಲಾಖೆಯ ವಸತಿಗೃಹದಲ್ಲಿ ನಡೆದಿದೆ.

ಮಂಡ್ಯ ಮೂಲದ ರಶ್ಮಿ(27ವ) ಮೃತ ದುರ್ದೈವಿ. ಅರಣ್ಯ ಇಲಾಖೆಯಲ್ಲಿ DRFO ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಶ್ಮಿ ಕೊಡಗು ಜಿಲ್ಲೆ ಮಡಿಕೇರಿಯ ಅರಣ್ಯ ಭವನ ಬಳಿ ಇರುವ ವಸತಿ ಗೃಹದಲ್ಲಿ ತಂಗಿದ್ದರು.

ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!