Sunday, May 19, 2024
spot_imgspot_img
spot_imgspot_img

ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಕೆ.ಭೈರಪ್ಪ ಹೃದಯಾಘಾತದಿಂದ ನಿಧನ

- Advertisement -G L Acharya panikkar
- Advertisement -

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಕೆ.ಭೈರಪ್ಪ(69) ಅವರು ಹೃದಯಾಘಾತದಿಂದ ನಿಧನ ಹೊಂದಿದರು.

2014 ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿದ್ದರು. ಆ ಬಳಿಕ ಆದಿ ಚುಂಚನ ಗಿರಿಯಲ್ಲಿ ಸಹ ಕುಲಪತಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ತೀವ್ರ ಹೃದಯಾಘಾತಗೊಂಡು ನಿಧನ ಹೊಂದಿದ್ದಾರೆ. ಮೃತರು , ಪತ್ನಿ, ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

- Advertisement -

Related news

error: Content is protected !!