- Advertisement -
- Advertisement -


ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆಲುವು ಸಾಧಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಬಳಿಕ ಬದಲಾದ ರಾಜಕೀಯ ವಿದ್ಯಮಾನಗಳಿಂದ ಕಾಂಗ್ರೆಸ್ ತೊರೆದು ಬಿಜೆಪಿಗೆ ವಾಪಸ್ ಆಗಿದ್ದ ಶೆಟ್ಟರ್ಗೆ ಬೆಳಗಾವಿ ಲೋಕಸಭಾ ಟಿಕೆಟ್ ನೀಡಲಾಗಿತ್ತು, ಇದೀಗ ಶೆಟ್ಟರ್ ಒಟ್ಟು 7,56,471 ಮತಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ವಿರುದ್ಧ 1,75,574 ಮತಗಳಿಂದ ಗೆದ್ದಿದ್ದಾರೆ.
- Advertisement -








