Friday, June 19, 2026
spot_imgspot_img
spot_imgspot_img

ಮಾಜಿ ಸಿಎಂ ವೀರಪ್ಪ ಮೊಯ್ಲಿಗೆ ಪುತ್ರಿ ವಿಯೋಗ

- Advertisement -
- Advertisement -

ಮಾಜಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸಾ ಮೊಯ್ಲಿಯವರು ರವಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿವುದಾಗಿ ವರದಿಯಾಗಿದೆ.

ಹಂಸಾ ಮೊಯ್ಲಿ(46) ಕೆಲ ದಿನಗಳಿದಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹಂಸಾ ಮೊಯ್ಲಿ ಅವರು ಭರತನಾಟ್ಯ ಕಲಾವಿದೆ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು.

ಪುತ್ರಿ ಹಂಸ ಮೊಯ್ಲಿ ಸಾವಿನ ಸುದ್ದಿ ತಿಳಿದು ಛತ್ತೀಸ್‌ಘಡದಲ್ಲಿದ್ದ ವೀರಪ್ಪ ಮೊಯ್ಲಿ ರಾತ್ರಿಯೇ ವಾಪಾಸ್ ಆಗಿದ್ದಾರೆ. ನಾಳೆ ಬೆಳಗ್ಗೆ (ಜುಲೈ 1) ವೀರಪ್ಪ ಮೊಯ್ಲಿ ಪುತ್ರಿಯ ಅಂತ್ಯ ಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

- Advertisement -

Related news

error: Content is protected !!