



ರಾಮನಗರ: ಸದಾ ಗನ್ ಮ್ಯಾನ್ ಇಟ್ಕಂಡು ಓಡಾಡುವ ರಿಕ್ಕಿ ರೈ ಮೇಲೆ ಮಧ್ಯರಾತ್ರಿ ರಾಮನಗರ ತಾಲೂಕಿನ ಬಿಡದಿಯ ಅವರ ಮನೆ ಬಳಿಯೇ ಫೈರಿಂಗ್ ಮಾಡಿರುವ ಘಟನೆ ನಡೆದಿದೆ. ಕೂದಳೆಲೆ ಅಂತರದಲ್ಲಿ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮ್ಯಾನ್ ರಿಕ್ಕಿ ರೈ ಬಚಾವ್ ಆಗಿದ್ದಾರೆ.
ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ರಿಕ್ಕಿಗೆ ಚಿಕಿತ್ಸೆ ಮುಂದುವರೆದಿದೆ. ಘಟನೆಗೆ ಸಂಬಂಧಿಸಿದಂತೆ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧ, ರಾಕೇಶ್ ಮಲ್ಲಿ ನಿತೇಶ್ ಶೆಟ್ಟಿ ಮತ್ತು ವೈದ್ಯನಾಥ ಎಂಬವರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.ಇನ್ನು ರಿಕ್ಕಿ ರೈ ಯವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ಎರಡನೇ ಮಹಡಿಗೆ ಶಿಫ್ಟ್ ಮಾಡಲಾಗಿದೆ.
ಮಣಿಪಾಲ ಆಸ್ಪತ್ರೆಯ ಆವರಣದಲ್ಲಿ ಸಾಕಷ್ಟು ಪೊಲೀಸ ನಿಯೋಜನೆಯಾಗಿದೆ. ಮತ್ತು ರಿಕ್ಕಿ ರೈ ಯವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ. ಘಟನೆ ವೇಳೆ ಬಸವರಾಜ್ ಕಾರು ಚಾಲನೆ ಮಾಡುತ್ತಿದ್ದರು. ಹೀಗಾಗಿ ಫೈರಿಂಗ್ ಆಗುತ್ತಿದ್ದಂತೆ ಅವರು ಮುಂದೆ ಬಾಗಿದ್ದಾರೆ. ಹಾಗಾಗಿ ಕೂದಳೆಲೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಬಸವರಾಜ್ ದೂರು ಆಧರಿಸಿ A1 ರಾಕೇಶ್ ಮಲ್ಲಿ, A2 ಅನುರಾಧಾ, A3 ನಿತೇಶ್ ಶೆಟ್ಟಿ ಹಾಗೂ A4 ವೈದ್ಯನಾಥನ್ ವಿರುದ್ಧ ಬಿಎನ್ಎಸ್ 109,3(5) ಹಾಗೂ ಆರ್ಮ್ಸ್ ಆ್ಯಕ್ಟ್ ಅಡಿ ಕೇಸ್ ದಾಖಲಾಗಿದೆ ಎಂಬ ಮಾಹಿತಿ ತಿಳಿದಿದೆ.








