Tuesday, June 9, 2026
spot_imgspot_img
spot_imgspot_img

ಮಾಜಿ ಸಚಿವ ಮನೋಹರ್‌ ತಹಶೀಲ್ದಾರ್‌ ಆನಾರೋಗ್ಯದಿಂದ ನಿಧನ

- Advertisement -
- Advertisement -

ಬೆಂಗಳೂರು: ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ನಿಧನರಾಗಿದ್ದಾರೆ.

ಹಾನಗಲ್ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ್ ತಹಶೀಲ್ದಾರ್ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಇವರು 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಇಂದು ಮಧ್ಯಾಹ್ನ ಮೃತದೇಹವನ್ನು ಹಾನಗಲ್ ಎನ್‌ಸಿಜೆಸಿ ಮಹಾವಿದ್ಯಾಲಯ ಅವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ಹುಟ್ಟೂರಾದ ಅಕ್ಕಿಹೊಳಿ ಗ್ರಾಮದಲ್ಲಿರುವ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ.ನಾಲ್ಕು ಜನ ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಮನೋಹರ್ ತಹಶೀಲ್ದಾರ್ ಅಗಲಿದ್ದಾರೆ.

- Advertisement -

Related news

error: Content is protected !!