Monday, June 8, 2026
spot_imgspot_img
spot_imgspot_img

ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಅನಾರೋಗ್ಯದಿಂದ ನಿಧನ

- Advertisement -
- Advertisement -

ಯಾದಗಿರಿ: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ (71) ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ವೆಂಕಟರೆಡ್ಡಿ 2018ರಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಿ ಯಾದಗಿರಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಮೃತರ ಪಾರ್ಥಿವ ಶರೀರವನ್ನು ಇಂದು ರಾತ್ರಿ ಯಾದಗಿರಿಗೆ ತರಲಾಗುವುದು. ನಾಳೆ ಸಂಜೆ ಯಾದಗಿರಿ ತಾಲೂಕಿನಲ್ಲಿರುವ ಸ್ವಗ್ರಾಮದ ಜಮೀನಿನಲ್ಲಿ ವೆಂಕಟರೆಡ್ಡಿ ಅವರ ಅಂತ್ಯಕ್ರಿಯೆ ನಡೆಯಲಿರುವುದು.

- Advertisement -

Related news

error: Content is protected !!