Tuesday, April 30, 2024
spot_imgspot_img
spot_imgspot_img

ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾದ ಮಾಜಿ ಎಂಎಲ್​ಸಿ ತೇಜಸ್ವಿನಿ ಗೌಡ

- Advertisement -G L Acharya panikkar
- Advertisement -

ವಿಧಾನ ಪರಿಷತ್​ ಮಾಜಿ ಸದಸ್ಯೆ ತೇಜಸ್ವಿನಿ ಗೌಡ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ತೇಜಸ್ವಿನಿ ಗೌಡ ಅವರನ್ನು ಜೈ ರಾಮ್ ರಮೇಶ್ ಅವರು ಕಾಂಗ್ರೆಸ್​​ಗೆ ಸ್ವಾಗತ ಮಾಡಿದರು.

ಬಿಜೆಪಿಯಿಂದ ವಿಧಾನ​ ಪರಿಷತ್ ​ಸದಸ್ಯೆಯಾಗಿದ್ದ ತೇಜಸ್ವಿನಿ ಗೌಡ ಇತ್ತಿಚೇಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ವಿಧಾನ್​ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿ, ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ಉಲ್ಲೇಖಿಸಿದ್ದರು.

ತೇಜಸ್ವಿನಿ ಗೌಡ ಬಿಜೆಪಿಯಿಂದ ಮೈಸೂರು ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕೆಟ್ ಕೊಟ್ಟಿಲ್ಲ. ಇದರಿಂದ ಅವರು ಅಸಮಾಧಾನಗೊಂಡಿದ್ದರು. ಇದೀಗ ದೆಹಲಿಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದಾರೆ.

- Advertisement -

Related news

error: Content is protected !!