- Advertisement -
- Advertisement -


ಬೆಂಗಳೂರು: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರೊಬ್ಬರು ಅಪಾರ್ಟ್‌ಮೆಂಟ್‌ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ (52) ಎಂದು ಗುರುತಿಸಲಾಗಿದೆ.
ಒಂದು ಅಪಾರ್ಟ್ಮೆಂಟ್‌ನಲ್ಲಿ 4ನೇ ಮಹಡಿಯಿಂದ ಜಿಗಿದಿದ್ದಾರೆ. ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಿಸಿದ್ದಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲವಾದರೂ ಮೇಲ್ನೋಟಕ್ಕೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. 1971ರ ಅಕ್ಟೋಬರ್ 16ರಂದು ಅರಸೀಕೆರೆಯಲ್ಲಿ ಜನಿಸಿದ್ದ ಡೇವಿಡ್ ಜೂಡ್ ಜಾನ್ಸನ್ ಟೀಂ ಇಂಡಿಯಾ ಪರವಾಗಿ ಆಡಿದ್ದಾರೆ. ಅಲ್ಲದೇ ರಣಜಿಯಲ್ಲಿ ಬೆಳಗಾವಿ ಪ್ಯಾಂಥರ್ಸ್, ಕರ್ನಾಟಕ ತಂಡದ ಪರವಾಗಿಯೂ ಆಡಿದ್ದಾರೆ.
- Advertisement -