Sunday, June 29, 2025
spot_imgspot_img
spot_imgspot_img

ಉಡುಪಿಯ ಮಾಜಿ ಶಾಸಕ ಯು.ಆರ್ ಸಭಾಪತಿ ನಿಧನ

- Advertisement -
- Advertisement -
vtv vitla

ಉಡುಪಿ : ಮಾಜಿ ಶಾಸಕ,‌ ಹಿರಿಯ ರಾಜಕಾರಣಿ ಯು.ಆರ್. ಸಭಾಪತಿ‌(71) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಉತ್ತರ ವಿಭಾಗದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು 1989ರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉಡುಪಿ ಕ್ಷೇತ್ರದಿಂದ ಟಿಕೆಟ್ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಮನೋರಮಾ ಮಧ್ವರಾಜ್ ವಿರುದ್ಧ ಸ್ಪರ್ಧಿಸಿ ಸೋಲು ಕಂಡರು. ಬಳಿಕ 1994ರಲ್ಲಿ ಎಸ್.ಬಂಗಾರಪ್ಪ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಉಡುಪಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದರು.

1999 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾದರು. 2004 ರ ಚುನಾವಣೆಯಲ್ಲಿ ಇವರು ರಘುಪತಿ ಭಟ್ ವಿರುದ್ದ ಸೋಲುಂಡರು. ಮೃತರು ಪತನ್‌ಇ, ಇಬ್ಬರು ಪುತ್ರರು ಹಾಗು ಓರ್ವ ಪುತ್ರಿಯನ್ನು ಅಗಲಿದ್ದಾರೆ.

- Advertisement -

Related news

error: Content is protected !!