Monday, July 20, 2026
spot_imgspot_img
spot_imgspot_img

ಕೃಷಿ ಹೊಂಡದಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳು ಸಾವು!

- Advertisement -
- Advertisement -

ಯಾದಗಿರಿ: ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ.

ಕಿರಣ್(6), ಬಸಮ್ಮ(11), ಶರತ್(6), ಹನುಮೇಶ್(7) ಮೃತ ಮಕ್ಕಳು. ಶಾಲೆಗೆ ರಜೆ ಇದ್ದ ಕಾರಣ ಮಕ್ಕಳು ಈಜಲೆಂದು ಕೃಷಿ ಹೊಂಡಕ್ಕೆ ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ನಾಲ್ವರು ಮೃತಪಟ್ಟಿದ್ದಾರೆ

ಮಕ್ಕಳನ್ನು ಕಳೆದುಕೊಂಡು ಪೋಷಕರು ಆಘಾತಗೊಂಡಿದ್ದು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!