Monday, June 8, 2026
spot_imgspot_img
spot_imgspot_img

ಸಾಲಬಾಧೆಯಿಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು

- Advertisement -
- Advertisement -

ಆನೇಕಲ್‌: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ.

ಗಂಡ, ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ಬಳಿಕ ತಾಯಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.‌ ಅದೃಷ್ಟವಶಾತ್‌ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಡ ಶಿವು (32), ಮಗಳು ಚಂದ್ರಕಳಾ (11) ಮಗ ಉದಯ್ ಸೂರ್ಯ (07) ಸಾವನ್ನಪ್ಪಿದ್ದಾರೆ.

ಈ ಹಿಂದೆ ಪತಿ ಅಪಘಾತದಲ್ಲಿ ಗಾಯಗೊಂಡಿದ್ದ ಕಾರಣ ಚಿಕಿತ್ಸೆಗಾಗಿ ಕುಟುಂಬ ಸಾಲ ಮಾಡಿಕೊಂಡಿತ್ತು. ಸಾಲ ಹೆಚ್ಚಾಗಿದ್ದರಿಂದ ದಂಪತಿ ಆತ್ಮಹತ್ಯೆಗೆ ನಿರ್ಧಾರ ಮಾಡಿದ್ದಾರೆ. ನಾವು ಸತ್ತರೆ ಮಕ್ಕಳು ತಬ್ಬಲಿಗಳಾಗುತ್ತಾರೆ ಅಂತ ಮಕ್ಕಳನ್ನೂ ಸಾಯಿಸುವ ನಿರ್ಧಾರ ಮಾಡಿದ್ದಾರೆ.

ಮೊದಲಿಗೆ ಗಂಡ ಮತ್ತು ಮಕ್ಕಳ ಕುತ್ತಿಗೆಯನ್ನ ವೇಲ್‌ನಿಂದ ಹೆಂಡತಿ ಕೊಲೆ ಮಾಡಿದ್ದಾಳೆ. ಬಳಿಕ ತಾನೂ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾಳೆ. ಹಗ್ಗ ತುಂಡಾದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಸದ್ಯ ಮಹಿಳೆಗೆ ಹೊಸಕೋಟೆ ಸರ್ಕಾರಿ ಆಸ್ವತ್ರೆಯಲ್ಲಿ‌ ಚಿಕಿತ್ಸೆ ಕೊಡಿಸಲಾಗುತ್ತಿದೆ.

- Advertisement -

Related news

error: Content is protected !!