Monday, June 17, 2024
spot_imgspot_img
spot_imgspot_img

ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ..!

- Advertisement -G L Acharya panikkar
- Advertisement -

ಲಾರಿ- ಓಮಿನಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಭೀಕರ ಅಪಘಾತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ​ ಟ್ರಾಫಿಕ್ ಜಾಮ್ ಉಂಟಾಗಿದ್ದು, ಕೂಡಲೇ ಸ್ಥಳಕ್ಕೆ ಬಣಕಲ್ ಠಾಣೆಯ ಪೊಲೀಸರು ದೌಡಾಯಿಸಿ ರಸ್ತೆ ಕ್ಲಿಯರ್ ಮಾಡುತ್ತಿದ್ದಾರೆ.

ಓಮಿನಿ ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ತೆರಳುತ್ತಿತ್ತು. ಮೆಸ್ಕಾಂ ಲಾರಿ ಮೂಡಿಗೆರೆಯಿಂದ ಕೊಟ್ಟಿಗೆಹಾರಕ್ಕೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.

ಮೃತರು ಚಿತ್ರದುರ್ಗ ಮೂಲದವರಾಗಿದ್ದು, ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಪಡೆದು ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ., ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರಲ್ಲಿ ಮೂವರು ಪುರುಷರು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಇನ್ನು ಮೂವರ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

- Advertisement -

Related news

error: Content is protected !!