Sunday, May 5, 2024
spot_imgspot_img
spot_imgspot_img

ಸುರತ್ಕಲ್: SSLC ಪ್ರಿಪರೇಟರಿ ಪರೀಕ್ಷೆ ಬರೆದು ನಾಪತ್ತೆಯಾಗಿದ್ದ ನಾಲ್ಕು ವಿದ್ಯಾರ್ಥಿಗಳು ನದಿಯಲ್ಲಿ ಶವವಾಗಿ ಪತ್ತೆ

- Advertisement -G L Acharya panikkar
- Advertisement -

ಸುರತ್ಕಲ್: ಮಂಗಳವಾರ ನಾಪತ್ತೆಯಾಗಿದ್ದ ಸುರತ್ಕಲ್ ಖಾಸಗಿ ಶಾಲೆಯ ನಾಲ್ಕು ವಿದ್ಯಾರ್ಥಿಗಳು ಹಳೆಯಂಗಡಿಯ ಕೊಪ್ಪಳ ಆಣೆಕಟ್ಟಿನ ರೈಲ್ವೆ ಸೇತುವೆಯ ಕೆಳಭಾಗದ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

10 ನೇ ತರಗತಿಯ ಯಶ್ಚಿತ್, ಚಂದ್ರಕಾಂತ್, ನಿರುಪ್, ಅನ್ವಿತ್, ರಾಘವೇಂದ್ರ ಮೃತಪಟ್ಟವರು.

ಮಂಗಳೂರು ತಾಲೂಕಿನ ಸುರತ್ಕಲ್ ಖಾಸಗಿ ಶಾಲೆಯ ನಾಲ್ವರು ವಿದ್ಯಾರ್ಥಿಗಳು ನಿನ್ನೆ SSLC ಪ್ರಿಪರೇಟರಿ ಪರೀಕ್ಷೆ ಬರೆದ ನಂತರ ಮನೆಗೆ ಬಾರದೆ ಕಾಣೆಯಾಗಿದ್ದರು.ಈ ಕುರಿತು ಮಕ್ಕಳ ಪೋಷಕರು ರಾತ್ರಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ನಾಪತ್ತೆ ಪ್ರಕರಣ ದಾಖಲಾಗುತ್ತಿದ್ದಂತೆಯೇ ಕಾರ್ಯಾಚರಣೆಗೆ ಇಳಿದ ಸುರತ್ಕಲ್ ಪೊಲೀಸರು, ಶಾಲೆ ಮತ್ತು ಬಸ್ ನಿಲ್ದಾಣದ ಬಳಿಯ ಸಿಸಿಟಿವಿ ದೃಶ್ಯಾವಳಿಗಳನ್ನು ತರಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಸುರತ್ಕಲ್ ಬಸ್ ನಿಲ್ದಾಣದಿಂದ ಬಸ್ ಹತ್ತಿ ಹಳೆಯಂಗಡಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದಿರುವುದನ್ನು ಪತ್ತೆಹಚ್ಚಿತ್ತಾರೆ. ಜೊತೆಗೆ ವಿದ್ಯಾರ್ಥಿಯೋರ್ವನ ಬಳಿ ಇತ್ತೆನ್ನಲಾದ ಮೊಬೈಲ್ ಟವರ್ ಲೊಕೇಶನ್ ಆಧರಿಸಿ ವಿದ್ಯಾರ್ಥಿಗಳು ನದಿಯ ದಡಕ್ಕೆ ಬಂದಿರುವುದನ್ನು ಖಚಿತ ಪಡಿಸಿಕೊಂಡು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ನದಿಯ ದಡದಲ್ಲಿ ಮಕ್ಕಳ ಶಾಲೆಯ ಚೀಲಗಳು, ಚಪ್ಪಲಿ ಶಾಲೆಯ ಸಮವಸ್ತ್ರಗಳು ಪತ್ತೆಯಾಗಿವೆ. ಎಲ್ಲಾ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ವೆನ್ ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪರೀಕ್ಷೆ ನಂತರ ನದಿಗೆ ಈಜಲು ಹೋಗಿ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ

- Advertisement -

Related news

error: Content is protected !!