- Advertisement -
- Advertisement -


ಸುಳ್ಯ: ವಂಚನೆ ಪ್ರಕರಣವೊಂದರಲ್ಲಿ ಸುಮಾರು ನಾಲ್ಕು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.


ಸುಳ್ಯ ಪೊಲೀಸ್ ಠಾಣಾ ಅ.ಕ್ರ.47/2022 (ಐಪಿಸಿ ಕಲಂ 406, 420) ಪ್ರಕರಣದಲ್ಲಿ ಆರೋಪಿಯಾಗಿರುವ ಕಡೂರು ಗ್ರಾಮದ ನಿವಾಸಿ ನಾಗೇಶ್ ಎಂಬಾತನು ದೀರ್ಘಕಾಲದಿಂದ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಸುಳ್ಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ 359 ರಮೇಶ್ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ 2298 ಶ್ರೀಶೈಲ ಅವರುಗಳು ದಿನಾಂಕ 18-12-2025ರಂದು ಬೆಂಗಳೂರಿನ ಚಿಕ್ಕಬಿದರಿಕಲ್ಲು ಪ್ರದೇಶದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ದಸ್ತಗಿರಿ ಮಾಡಿದರು.

ಬಂಧಿತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
- Advertisement -








