Thursday, September 10, 2026
spot_imgspot_img
spot_imgspot_img

ಮುಂಬೈ ಪೊಲೀಸರ ಹೆಸರಲ್ಲಿ ವೈದ್ಯನಿಗೆ ಕೋಟ್ಯಾಂತರ ರೂಪಾಯಿ ವಂಚನೆ: ಇಬ್ಬರು ಅರೆಸ್ಟ್‌

- Advertisement -
- Advertisement -

ಮುಂಬೈ ಪೊಲೀಸರೆಂದು ನಂಬಿಸಿ ಚಿತ್ರದುರ್ಗದ ಹಿರಿಯ ವೈದ್ಯರೊಬ್ಬರಿಂದ 1.27 ಕೋಟಿ ರೂ. ದೋಚಿದ್ದ ಸೈಬರ್ ವಂಚಕರನ್ನು ಬಂಧಿಸುವಲ್ಲಿ ಚಿತ್ರದುರ್ಗದ ಸೆನ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಅಸ್ಸಾಂ ಮೂಲದ ಆರೋಪಿ ಪವನ್ ಕುಮಾರ್, ಜಾಕೀರ್ ಬೋರಾ ಎಂದು ಗುರುತಿಸಲಾಗಿದೆ.

ವಂಚಕರು ಚಿತ್ರದುರ್ಗದ ಹಿರಿಯ ವೈದ್ಯ ಶ್ರೀನಿವಾಸ್ ಶೆಟ್ಟಿಗೆ ಆಗಸ್ಟ್ 23 ರಂದು ವಾಟ್ಸಪ್ ಹಾಗೂ ನಾರ್ಮಲ್ ಕರೆ ಮಾಡಿದ್ದು, ನಾವು ಟಿಆರ್‌ಎಐ & ಮುಂಬೈ ಪೊಲೀಸರೆಂದು ಹೇಳಿದ್ದು, ನಿಮ್ಮ ಬ್ಯಾಂಕ್ ಖಾತೆ ಬಳಸಿ ಮನಿ ಲ್ಯಾಂಡರಿಂಗ್ ವಂಚನೆ ಆಗಿದೆ. ಅಲ್ಲದೇ ನಿಮ್ಮ ಖಾತೆಯ ಹಣದ ಆಡಿಟ್ ಮಾಡಬೇಕಿದೆ ಎಂದು ನಂಬಿಸಿ ತಮ್ಮ ಖಾತೆಗೆ 1.27 ಕೋಟಿ ರೂ. ಹಣ ವರ್ಗಾಯಿಸಿಕೊಂಡು ವಂಚಿಸಿದ್ದರು.

ಇದರಿಂದಾಗಿ ಕಂಗಾಲಾದ ವೈದ್ಯ ಶ್ರೀನಿವಾಸ್ ಶೆಟ್ಟಿಯವರು ಆಗಸ್ಟ್ 26 ರಂದು ಸೆನ್ ಠಾಣೆಯಲ್ಲಿ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ವಂಚಕರ ಜಾಡನ್ನು ಬೆನ್ನತ್ತಿದ್ದ ಪೊಲೀಸರು, ಆರೋಪಿಗಳಾದ ಪವನ್ ಕುಮಾರ್, ಜಾಕೀರ್ ಬೋರಾ ಎಂಬವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಂಚಿತರಿಂದ ವಿವಿಧ ಖಾತೆಗಳಿಗೆ ವರ್ಗಾಯಿಸಿದ್ದ 16.89 ಲಕ್ಷ ರೂ. ಫ್ರೀಜ್ ಮಾಡಲಾಗಿದೆ. ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿದ್ದು, ಈ ಸಂಬಂಧ ಚಿತ್ರದುರ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!