Friday, June 5, 2026
spot_imgspot_img
spot_imgspot_img

ಮಂಗಳೂರು: ಸ್ಟಾಕ್ ಟ್ರೇಡಿಂಗ್ ಎಂಬ ಜಾಹೀರಾತು ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ..!

- Advertisement -
- Advertisement -

ಮಂಗಳೂರು: ಫೇಸ್ ಬುಕ್‌ನಲ್ಲಿ ಕಾಣಿಸಿಕೊಂಡ ಸ್ಟಾಕ್ ಟ್ರೇಡಿಂಗ್ ಜಾಹೀರಾತು ನೋಡಿ ಹಣ ಹೂಡಿಕೆ ಮಾಡಿದ ವ್ಯಕ್ತಿ ಯೊಬ್ಬರು 18.53 ಲ.ರೂ. ವಂಚನೆಗೊಳಗಾದ ಘಟನೆ ವರದಿಯಾಗಿದೆ.

ವಿಜಯ ಕುಮಾ‌ರ್ ಎಂಬುವವರು ಫೇಸ್‌ಬುಕ್‌ನಲ್ಲಿ ಸ್ಯಾಕ್ ಟ್ರೇಡಿಂಗ್ ಎಂಬ ಜಾಹೀರಾತು ನೋಡಿ ಅದರಲ್ಲಿದ್ದ ಲಿಂಕ್‌ನ ಮೂಲಕ 2013ರ ಡಿ.2ರಂದು ವಾಟ್ಸ್ ಆಫ್ ಗ್ರೂಪ್‌ನಲ್ಲಿ ಸೇರ್ಪಡೆಯಾಗಿದ್ದರು. ಆ ಗ್ರೂಪ್‌ನಲ್ಲಿ ಹಲವಾರು ಅಡ್ಮಿನ್, ಸದಸ್ಯರಿದ್ದರು. ಗ್ರೂಪ್‌ ಚೀಫ್ ಅಡ್ಮಿನ್ ಆಗಿದ್ದ ಅಮಿತ್ ಶಾ ಎಂಬಾತ ಪ್ರತೀ ದಿನ ಆನ್‌ಲೈನ್ ವೀಡಿಯೋ ಕ್ಲಾಸ್ ಮೂಲಕ ಸ್ಟಾಕ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿ ದುಪ್ಪಟ್ಟು ಮಾಡುವ ಬಗ್ಗೆ ವಿವರಿಸುತ್ತಿದ್ದ.

ವಿಜಯ ಅವರು ಅದನ್ನು ಸತ್ಯವೆಂದು ಭಾವಿಸಿ ಹಣ ತೊಡಗಿಸಿದ್ದರು. 2024ರ ಜ. 11ರಿಂದ ಫೆ. 5ರ ವರೆಗೆ ಹಂತ ಹಂತವಾಗಿ ಒಟ್ಟು 18.53 ಲ.ರೂ.ಗಳನ್ನು ಪಾವತಿಸಿದ್ದರು. ಅದನ್ನು ಹಿಂಪಡೆಯಲು ಸ್ಟಾಕ್ ಟ್ರೇಡಿಂಗ್ ಕಂಪೆನಿಯ ಕಸ್ಟಮರ್ ಕೇರ್ ಅವರನ್ನು ಸಂರ್ಪಿಕಿಸಿದಾಗ ಶೇ. 40 ಕಮಿಷನ್ ಆಗಿ ನೀಡುವಂತೆ ಹಾಗೂ ಇನ್ನೂ ಹೆಚ್ಚಿನ ಹಣ ಹೂಡಿಕೆ ಮಾಡುವಂತೆ ಒತ್ತಾಯಿಸಿದರು. ಆಗ ಅನುಮಾನ ಬಂದ ವಿಜಯ ಕುಮಾರ್ ಅವರು ಸ್ನೇಹಿತರಲ್ಲಿ ವಿಚಾರಿಸಿದಾಗ ಮೋಸ ಹೋಗಿರುವುದು ಗೊತ್ತಾಯಿತು. ಈ ಬಗ್ಗೆ ಮಂಗಳೂರಿನ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

- Advertisement -

Related news

error: Content is protected !!