Thursday, July 23, 2026
spot_imgspot_img
spot_imgspot_img

ಜೂ.15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ–ಕೇರಳಂ ನೂತನ ಸಿಎಂ ವಿ.ಡಿ ಸತೀಶನ್‌ ಘೋಷಣೆ

- Advertisement -
- Advertisement -

ತಿರುನಂತಪುರಂ: ಕೇರಳಂ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀರಿಸಿದ ವಿ.ಡಿ ಸತೀಶನ್‌ ಹೊಸ ಸರ್ಕಾರದ ಮೊದಲ ಸಂಪುಟ ಸಭೆಯಲ್ಲೇ ಪಂಚ ಗ್ಯಾರಂಟಿ ಪೈಕಿ ಎರಡು ಗ್ಯಾರಂಟಿಗಳನ್ನು ಈಡೇರಿಸಿದ್ದಾರೆ.

ಜೂನ್‌ 15 ರಿಂದ ರಾಜ್ಯದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಲಭ್ಯವಿರಲಿದೆ ಎಂದು ವಿಡಿಎಸ್‌ ಘೋಷಣೆ ಮಾಡಿದ್ದಾರೆ. ಅಲ್ಲದೇ ವೃದ್ಧರಿಗಾಗಿ ಪ್ರತ್ಯೇಕ ಇಲಾಖೆ ಸ್ಥಾಪನೆಗೂ ಸಂಪುಟ ಒಪ್ಪಿರುವುದಾಗಿ ತಿಳಿಸಿದ್ದಾರೆ.

ಜೂನ್‌ 15 ರ KSRTC ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಲಭ್ಯವಿರಲಿದೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಂತರ ಪ್ರಕಟಿಸಲಾಗುತ್ತದೆ. ಇದರೊಂದಿಗೆ ವೃದ್ಧರಿಗಾಗಿ ವಿಶೇಷ ಇಲಾಖೆ ರಚಿಸಲು ಸಂಪುಟ ನಿರ್ಧರಿಸಿದ್ದು, ವೃದ್ಧರಿಗಾಗಿ ವಿಶೇಷ ಇಲಾಖೆ ತರುತ್ತಿರುವುದು ದೇಶದಲ್ಲಿ ಇದೇ ಮೊದಲು ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಆಶಾ ಕಾರ್ಯಕರ್ತೆಯರಿಗೆ ಗೌರವ ಧನವನ್ನು ಮೊದಲ ಹಂತದಲ್ಲಿ 3,000 ರೂ. ಹೆಚ್ಚಳ ಮಾಡಲಾಗಿದ್ದು, ಒಟ್ಟು ವೇತನ 9,000 ರೂ. ನಿಂದ 12,000 ರೂ.ಗಳಿಗೆ ಏರಿಕೆಯಾಗಲಿದೆ. ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರು, ಅಡುಗೆ ಕಾರ್ಮಿಕರು(ಬಿಸಿಯೂಟ ಸಿಬ್ಬಂದಿ) ಹಾಗೂ ಪೂರ್ವ ಪ್ರಾಥಮಿಕ ಶಿಕ್ಷಕರು ಮತ್ತು ಆಯಾಗಳ ವೇತನವನ್ನು ತಲಾ 1,000 ರೂ. ಹೆಚ್ಚಿಸಲಾಗಿದೆ ಎಂದು ಘೋಷಿಸಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!