Monday, May 6, 2024
spot_imgspot_img
spot_imgspot_img

ವಿಟ್ಲ: (ಜೂ.20) ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ಉಚಿತ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣಾ ಶಿಬಿರ ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು ನೇತ್ರಾಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮಂಗಳೂರು, Onesight essilorluxotica foundation ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಮಂಗಳೂರು ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಮಂಗಳಪದವು, ವಿಟ್ಲ ಇವರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ಉಚಿತ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣಾ ಶಿಬಿರ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.

ರಕ್ತದಾನ ಶಿಬಿರ

ಇನ್ನು ಇದೇ ವೇಳೆ ಯೂತ್ ರೆಡ್ ಕ್ರಾಸ್ ವಿಂಗ್ ರಾಷ್ಟ್ರೀಯ ಸೇವಾ ಯೋಜನೆ ರೋವರ್ಸ್ ಮತ್ತು ರೇಂಜರ್ಸ್ ರೆಡ್ ರಿಬ್ಬನ್ ಕ್ಲಬ್ ಸರ್ಕಾರ. ಐ.ಟಿ.ಐ. ವಿಟ್ಲ ಲಯನ್ಸ್ ಕ್ಲಬ್ ಮಂಗಳೂರು, ಆಟೋ ಮಾಲೀಕರು ಮತ್ತು ಚಾಲಕರ ಸಂಘ ವಿಟ್ಲ, ಟೆಂಪೋ, ಪಿಕಪ್ ಮತ್ತು ಜೀಪ್ ಮಾಲೀಕರು ಮತ್ತು ಚಾಲಕರ ಸಂಘ ವಿಟ್ಲ, ಸಹಯೋಗದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಮಂಗಳೂರು ಇದರ ಆಶ್ರಯದಲ್ಲಿ ರಕ್ತದಾನ ಶಿಬಿರವು ಜೂ.20ರಂದು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹೊಸ ಅಡಿಟೋರಿಯಂನಲ್ಲಿ ನಡೆಯಲಿದೆ.

ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಸ.ಪ್ರ.ದ.ಕಾ. ವಿಟ್ಲ IQAC ಸಂಚಾಲಕರು ಪ್ರೊ. ಪರಮೇಶ್ವರಿ ಎನ್‌ ಇವರು ನೇರವೆರಿಸಲಿದ್ದಾರೆ.

- Advertisement -

Related news

error: Content is protected !!