Monday, June 8, 2026
spot_imgspot_img
spot_imgspot_img

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ!

- Advertisement -
- Advertisement -

ಬೆಂಗಳೂರು: ರಾಜ್ಯದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳ ದಿನಗಣನೆ ಆರಂಭದ ಹಿನ್ನೆಲೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಮಹತ್ವದ ಕ್ರಮವೊಂದನ್ನು ಘೋಷಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಪ್ರಕಟಿಸಿದ್ದಾರೆ.

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ಪರೀಕ್ಷೆಗಳು ಜರುಗಲಿವೆ. ರಾಜ್ಯಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಲಿದ್ದಾರೆ.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಮತ್ತು ಬರಲು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಬಸ್ ನಿರ್ವಾಹಕರಿಗೆ ತಮ್ಮ ಹಾಲ್ ಟಿಕೆಟ್ ತೋರಿಸುವ ಮೂಲಕ ಈ ಸೌಲಭ್ಯವನ್ನು ಪಡೆಯಬಹುದು. ಉಚಿತ ಪ್ರಯಾಣದ ಸೌಲಭ್ಯವನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳು ತಪ್ಪದೇ ತಮ್ಮ ಹಾಲ್ ಟಿಕೆಟ್ ಅನ್ನು ಜೊತೆಯಲ್ಲಿಟ್ಟುಕೊಳ್ಳಬೇಕು ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!