Friday, April 19, 2024
spot_imgspot_img
spot_imgspot_img

ನೇರಳಕಟ್ಟೆ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷರಾಗಿ ಲತೀಫ್ ನೇರಳಕಟ್ಟೆ ಪುನರಾಯ್ಕೆ

- Advertisement -G L Acharya panikkar
- Advertisement -

ವಿಟ್ಲ : ನೆಟ್ಲಮುಡ್ನೂರು ಗ್ರಾಮದ ನೇರಳಕಟ್ಟೆ ಫ್ರೆಂಡ್ಸ್ ಸರ್ಕಲ್ ಇದರ ಅಧ್ಯಕ್ಷರಾಗಿ ಲತೀಫ್ ನೇರಳಕಟ್ಟೆ ಪುನರಾಯ್ಕೆಗೊಂಡಿದ್ದಾರೆ. ಸಂಘದ ಅಧ್ಯಕ್ಷ ಲತೀಫ್ ನೇರಳಕಟ್ಟೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ಆಯ್ಕೆ ನಡೆಯಿತು.

ಉಪಾಧ್ಯಕ್ಷರುಗಳಾಗಿ ಮಜೀದ್ ಮಾಣಿ, ರಝಾಕ್ ಸಾಹೇಬ್ ನೇರಳಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಪೆರಾಜೆ, ಕೋಶಾಧಿಕಾರಿಯಾಗಿ ರೋಹಿತಾಶ್ವ ಗಣೇಶನಗರ, ಜೊತೆ ಕಾರ್ಯದರ್ಶಿಗಳಾಗಿ ಝುಬೈರ್ ಪರ್ಲೊಟ್ಟು, ಮುನೀರ್ ಕೆಂಪುಗುಡ್ಡೆ, ಸಂಘಟನಾ ಕಾರ್ಯದರ್ಶಿಗಳಾಗಿ ಅತಾವುಲ್ಲಾ ನೇರಳಕಟ್ಟೆ, ಇಸ್ಮಾಯಿಲ್ ಅನಂತಾಡಿ, ಕ್ರೀಡಾ ಕಾರ್ಯದರ್ಶಿಗಳಾಗಿ ಮುಹಮ್ಮದ್ ಶಿಯಾಕ್, ಬದ್ರುದ್ದೀನ್ ನೇರಳಕಟ್ಟೆ ಆಯ್ಕೆಯಾದರು.

8 ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ನೇಮಿಸಲಾಯಿತು. ಕಾರ್ಯಕ್ರಮವನ್ನು ಲತೀಫ್ ನೇರಳಕಟ್ಟೆ ಸ್ವಾಗತಿಸಿ, ಚಂದ್ರಶೇಖರ ಪೆರಾಜೆ ವಂದಿಸಿದರು.

- Advertisement -

Related news

error: Content is protected !!