Saturday, June 28, 2025
spot_imgspot_img
spot_imgspot_img

ಮುಸ್ಲಿಂ ಯುವತಿಯೊಂದಿಗೆ ಸ್ನೇಹ..! ಬಜರಂಗದಳ ಕಾರ್ಯಕರ್ತನ ಮೇಲೆ 30 ಮಂದಿ ಯುವಕರಿಂದ ಹಲ್ಲೆ

- Advertisement -
- Advertisement -

ಚಿಕ್ಕಬಳ್ಳಾಪುರದಲ್ಲಿ ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಹೋಟೆಲ್​ಗೆ ಹೋಗಿದಕ್ಕೆ ಮುಸ್ಲಿಂ ಯುವಕರ ಗುಂಪು ನೈತಿಕ ಪೊಲೀಸ್ ಗಿರಿ ನಡೆಸಿತ್ತು. ಈಗ ಇದೇ ರೀತಿಯ ಮತ್ತೊಂದು ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಇನ್ಮುಂದೆ ನೈತಿಕ ಪೊಲೀಸ್​ಗಿರಿಗೆ ಅವಕಾಶ ಇಲ್ಲ, ಹೀಗೆ ಮಾಡುವವರ‌ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್​ ಇಲಾಖೆಗೆ ಖಡಕ್ ಸೂಚನೆ ನೀಡಿದ್ದರು. ಬಳಿಕ ಅಧಿಕಾರಿಗಳು ಕೂಡ ನೈತಿಕ ಪೊಲೀಸ್​ ಗಿರಿ ನಡೆಸುವವರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದರು. ವಾರ್ನಿಂಗ್ ಕೊಟ್ಟ ದಿನದಿಂದ ನಡೆದ ಎರಡು ಘಟನೆಯಿದು.!

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್‌ನಲ್ಲಿ ಬಿಜೆಪಿ, ಬಜರಂಗದಳದ ಹಿಂದೂ ಕಾರ್ಯಕರ್ತ ಅಜಿತ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಮುಸ್ಲಿಂ ಯುವತಿಯ ಜೊತೆ ಸ್ನೇಹ ಬೆಳೆಸಿದ ಹಿನ್ನೆಲೆಯಲ್ಲಿ 30 ಜನ ಮುಸ್ಲಿಂ ಯುವಕರ ಯುವತಿಯ ಜೊತೆ ರಸ್ತೆಯಲ್ಲಿ ಹೋಗುವಾಗ ದಾಳಿ ಮಾಡಿ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಅಜಿತ್ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಬಗ್ಗೆ ಅನ್ಯಕೋಮಿನ ಯುವತಿ ಬಣಕಲ್‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

Related news

error: Content is protected !!