Thursday, May 2, 2024
spot_imgspot_img
spot_imgspot_img

ವೀರಯೋಧ ಕ್ಯಾ.ಪ್ರಾಂಜಲ್‌ ಅಂತಿಮ ಯಾತ್ರೆ – ತ್ರಿವರ್ಣ ಧ್ವಜ ಹಿಡಿದು ಜನರಿಂದ ಸೆಲ್ಯೂಟ್‌

- Advertisement -G L Acharya panikkar
- Advertisement -

ಬೆಂಗಳೂರು: ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ನಡೆದ ಕಾದಾಟದಲ್ಲಿ ಹುತಾತ್ಮರಾದ ಕನ್ನಡಿಗ ಕ್ಯಾಪ್ಟನ್‌ ಪ್ರಾಂಜಲ್‌ ಅವರ ಅಂತಿಮ ಯಾತ್ರೆ ಬೆಂಗಳೂರಿನಲ್ಲಿ ನಡೆಯಿತು. ಮೆರವಣಿಗೆ ಮಾರ್ಗದುದ್ದಕ್ಕೂ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನರು, ವೀರಯೋಧನಿಗೆ ಭಾವುಕ ವಿದಾಯ ಹೇಳಿದ್ದಾರೆ.

ಶನಿವಾರ ಬೆಳಗ್ಗೆ ಜಿಗಣಿ ನಂದನವನ ಬಡಾವಣೆಯ ಸ್ವಗೃಹದಲ್ಲಿ ಕ್ಯಾಪ್ಟನ್‌ ಪ್ರಾಂಜಲ್‌ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಅಪಾರ ಸಂಖ್ಯೆಯಲ್ಲಿ ಜನರು, ಗಣ್ಯರು, ಬಂಧು-ಬಾಂಧವರು ಆಗಮಿಸಿ ವೀರಯೋಧನ ಅಂತಿಮ ದರ್ಶನ ಪಡೆದರು. ಜಿಗಣಿ ಓಟಿಸಿ ಸರ್ಕಲ್‌, ಬನ್ನೇರುಘಟ್ಟ ಮುಖ್ಯ ರಸ್ತೆ, ನೈಸ್‌ ರೋಡ್‌, ಕೋನಪ್ಪನ ಅಗ್ರಹಾರ ಸರ್ಕಲ್‌, ಕೂಡ್ಲುಗೇಟ್‌ ಮೂಲಕ ಹುತಾತ್ಮ ಯೋಧನ ಅಂತಿಮ ಯಾತ್ರೆ ಸಾಗಿದೆ. ಮಾರ್ಗದುದ್ದಕ್ಕೂ ನಿಂತಿದ್ದ ಜನರು ತ್ರಿವರ್ಣ ಧ್ವಜ ಹಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಈ ದೃಶ್ಯವು ನೋಡುಗರ ಮನಕಲಕುವಂತಿದೆ.

ಸೋಮಸುಂದರ ಪಾಳ್ಯ ಚಿತಾಗಾರದಲ್ಲಿ ಪ್ರಾಂಜಲ್‌ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಮತ್ತು ಸೇನಾ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಕ್ಯಾಪ್ಟನ್‌ ಅಂತಿಮ ಸಂಸ್ಕಾರ ಮಾಡಲಾಯಿತು.

- Advertisement -

Related news

error: Content is protected !!