Sunday, June 29, 2025
spot_imgspot_img
spot_imgspot_img

ಜುಲೈ ತಿಂಗಳಲ್ಲಿ ಅಂತ್ಯಗೊಳ್ಳಲಿದೆ ಗ್ರಾ.ಪಂ ಅಧ್ಯಕ್ಷ-ಉಪಾಧ್ಯಕ್ಷರ ಆಡಳಿತ | ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿಗೆ ಚುನಾವಣಾ ಆಯೋಗ ಆದೇಶ

- Advertisement -
- Advertisement -
vtv vitla

ಗ್ರಾ.ಪಂ ಅಧ್ಯಕ್ಷ-ಉಪಾಧ್ಯಕ್ಷರ ಆಡಳಿತ ಅವಧಿ ಜುಲೈ ತಿಂಗಳಲ್ಲಿ ಕೊನೆಗೊಳ್ಳಲಿದ್ದು, ರಾಜ್ಯ ಚುನಾವಣಾ ಆಯೋಗ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿಪಡಿಸುವಂತೆ ಆದೇಶ ಹೊರಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಅಧಿನಿಯಮದ ಪ್ರಕಾರ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ 5948 ಗ್ರಾಪಂಗಳಿಗೆ ತಾಲೂಕುವಾರು, ವರ್ಗವಾರು ಚುನಾವಣೆ 2020 ರಲ್ಲಿ ನಡೆದಿತ್ತು. ಅದಾದ ಬಳಿಕ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಹುದ್ದೆಗಳ ಸಂಖ್ಯೆಯನ್ನು ನಿರ್ದಿಷ್ಟಪಡಿಸಲಾಗಿದೆ. ಪರಿಶಿಷ್ಟ ಪಂಗಡ, ಜಾತಿ, ಹಿಂದುಳಿದ ವರ್ಗ ಹೀಗೆ ಎಲ್ಲಾ ವರ್ಗಗಳಿಗೂ ಮೀಸಲಾತಿ ನಿಗದಿಪಡಿಸುವ ಸಂಬಂಧ ಚುನಾವಣಾ ಆಯೋಗ ಮಾರ್ಗಸೂಚಿ ಹೊರಡಿಸಿದೆ.

ರಾಜ್ಯದಲ್ಲಿ ಮುಂದೆ ಹೊಸದಾಗಿ ಯಾವುದೇ ಗ್ರಾಪಂ ರಚಿತಗೊಂಡರೆ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿಯನ್ನು ರಾಜ್ಯ ಚುನಾವಣಾ ಆಯೋಗದ ಪೂರ್ವಾನುಮತಿ ಪಡೆದು ನಿರ್ಧರಿಸುವಂತೆ ಸೂಚಿಸಲಾಗಿದೆ. ಜೂನ್ ಅಂತ್ಯ ಅಥವಾ ಜುಲೈ ತಿಂಗಳಲ್ಲಿ ಮೀಸಲಾತಿ ನಿಗದಿ ಮಾಡುವ ಸಾಧ್ಯತೆ ಇದ್ದು, ಕುತೂಹಲಕ್ಕೆ ಕಾರಣವಾಗಲಿದೆ.

- Advertisement -

Related news

error: Content is protected !!