Tuesday, July 28, 2026
spot_imgspot_img
spot_imgspot_img

ಗದಗ: ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದಾಗ ಸಿಡಿಲು ಬಡಿದು ರೈತ ಸಾವು!

- Advertisement -
- Advertisement -

ಗದಗ: ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಮೆಣಸಗಿ ಗ್ರಾಮದಲ್ಲಿ ನಡೆದಿದೆ. ನಿಂಗಪ್ಪ ಅಮಾತ್ಯ(58) ಮೃತ ರೈತ ಎಂದು ಗುರುತಿಸಲಾಗಿದ್ದು, ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದಾಗ ಈ ಅವಘಡ ಸಂಭವಿಸಿದೆ.

ಮೃತ ವ್ಯಕ್ತಿ ಬೆಣ್ಣೆಹಳ್ಳ ಸಮೀಪದ ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದರು. ಮಳೆ ಆರಂಭವಾಗುತ್ತಿದ್ದಂತೆ ಕೆಲಸ ಮುಗಿಸಿಕೊಂಡು ಮನೆಗೆ ಬರುವ ವೇಳೆ ಸಿಡಿಲು ಬಡಿದಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರೋಣ ತಾಲೂಕಿನ ಹಲವೆಡೆ ಆಲಿಕಲ್ಲು, ಗುಡುಗು, ಸಿಡಿಲು ಸಹಿತ ಬಿರುಗಾಳಿ ಮಳೆಯಾಗಿದೆ.

ಬಿರುಗಾಳಿ ಮಳೆಗೆ ಅನೇಕ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಗದಗ ಜಿಲ್ಲೆ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!