Thursday, April 25, 2024
spot_imgspot_img
spot_imgspot_img

ಮಗಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಶರಣಾದ ತಾಯಿ!

- Advertisement -G L Acharya panikkar
- Advertisement -

ಗದಗ: ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ. ಯಲ್ಲವ್ವ ಚಂದಣ್ಣವರ(27), ಸ್ವಪ್ನಾ(2) ಮೃತಪಟ್ಟಿದ್ದು, ಸಮರ್ಥ್(6) ಗೆ ವಿಷ ಕುಡಿಸಲು ಬಂದಾಗ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾನೆ.

ಕೊಣ್ಣೂರು ಗ್ರಾಮದ ಯಲ್ಲವ್ವ ಚಂದಣ್ಣವರ ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಈ ಕಾಯಿಲೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಮಕ್ಕಳಾದ ಸಮರ್ಥ್ ಮತ್ತು ಸ್ವಪ್ನಾಳಿಗೂ ವಿಷ ಕುಡಿಸಿದ್ದಾರೆ.

ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ತಾಯಿ ಮತ್ತು ಮಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಇಬ್ಬರೂ ಮೃತಪಟ್ಟಿದ್ದಾರೆ. ಈ ಬಗ್ಗೆ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

driving
- Advertisement -

Related news

error: Content is protected !!