Sunday, July 19, 2026
spot_imgspot_img
spot_imgspot_img

ಎಸ್‌ಐಆರ್ ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಹೃದಯಾಘಾತದಿಂದ ಸಾವು

- Advertisement -
- Advertisement -

ಗದಗ: ಎಸ್‌ಐಆರ್ ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೆವಾಡಿ ಗ್ರಾಮದಲ್ಲಿ ನಡೆದಿದೆ.

ಗದಗ ಜಿಲ್ಲೆ ಬಾಗೆವಾಡಿಯ ರತ್ನಮ್ಮ ಬಳಿಗಾರ (43) ಮೃತ ಮಹಿಳೆ. ಎಸ್‌ಐಆರ್ ಹಿನ್ನೆಲೆ ರತ್ನಮ್ಮ ಬಿಎಲ್‌ಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಸಂಜೆ ವೇಳೆ ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಗ್ರಾಮಕ್ಕೆ ಭೇಟಿ ಕೊಟ್ಟಿದ್ದರು. ಈ ವೇಳೆ ಎಸ್‌ಐಆರ್ ಪ್ರಗತಿ ಪರಿಶೀಲನೆ ನಡೆಸಿದ್ದರು. ಗ್ರಾಮದ ಮಹೇಶಗೌಡ ಪಾಟೀಲ ಎಂಬವರ ಮನೆಯಲ್ಲಿ ಚಹಾ ವ್ಯವಸ್ಥೆ ಮಾಡಲಾಗಿತ್ತು. ಸಭೆ ಬಳಿಕ ಚಹಾ ಕುಡಿಯುವ ಸಂದರ್ಭದಲ್ಲಿ ರತ್ನಮ್ಮ ಕುಸಿದು ಬಿದ್ದಿದ್ದಾರೆ.

ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ರತ್ನಮ್ಮ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದ್ದು, ಈ ಘಟನೆ ಗದಗ ಜಿಲ್ಲೆ ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

Related news

error: Content is protected !!