Friday, April 26, 2024
spot_imgspot_img
spot_imgspot_img

ಕೇರಳ, ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಹೊರತುಪಡಿಸಿ ಉಳಿದೆಡೆ ಸರಳವಾಗಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಿ ಎಂ ಬೊಮ್ಮಾಯಿ ಗ್ರೀನ್ ಸಿಗ್ನಲ್

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಸಾರ್ವಜನಿಕ ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಕೇರಳ, ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಹೊರತುಪಡಿಸಿ ಉಳಿದೆಡೆ ಕೋವಿಡ್ ನಿಯಮ ಪಾಲನೆಯೊಂದಿಗೆ ಸರಳವಾಗಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಿಎಂ ಬಸವರಾಜ ಬೊಮ್ಮಾಯಿ ಅನುಮತಿ ನೀಡಿ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.

ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ ರ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದ್ದು, ಸಾರ್ವಜನಿಕ ಗಣೇಶೋತ್ಸವ ಕೇವಲ ಮೂರು ದಿನ ಮಾತ್ರ ಅವಕಾಶ ನೀಡಲಾಗಿದೆ. ಮನೋರಂಜನೆ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ, ಪ್ರತಿಷ್ಠಾಪನೆ ಮಾಡಬಹುದು. ಆದರೆ ಮೆರವಣಿಗೆ ಮಾಡುವಂತಿಲ್ಲ. ಸ್ಟೇಜ್ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ. ಜಿಲ್ಲಾಡಳಿತ ಸೂಚಿಸಿದ ಸ್ಥಳದಲ್ಲೇ ಗಣೇಶ ವಿಸರ್ಜನೆ ಮಾಡಬೇಕು ಎಂದು ಗೈಡ್ ಲೈನ್ ನೀಡಲಾಗಿದೆ.

ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ವರದಿ ಆಧರಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ನಿರ್ಧಾರ ಕೈಗೊಂಡಿದ್ದು, ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ 3 ದಿನ ಮಾತ್ರ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿದ್ದು, ಮೆರವಣಿಗೆಗೆ ಅವಕಾಶ ಇಲ್ಲ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

- Advertisement -

Related news

error: Content is protected !!