Sunday, October 6, 2024
spot_imgspot_img
spot_imgspot_img

ಕರ್ನಾಟಕದಲ್ಲಿ ಗಣೇಶನನ್ನೂ ಕಂಬಿ ಹಿಂದೆ ಹಾಕಲಾಗಿದೆ; ಪ್ರಧಾನಿ ಮೋದಿ ವಾಗ್ದಾಳಿ

- Advertisement -
- Advertisement -

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಣೇಶೋತ್ಸವದ ಮೆರವಣಿಗೆ ವೇಳೆ ಅನ್ಯಕೋಮಿನವರು ಕಲ್ಲು ತೂರಾಟ ನಡೆಸಿ, ಬೆಂಕಿ ಹಚ್ಚಿ ಗಲಭೆ ಎಬ್ಬಿಸಿದ್ದರು. ಇದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಪ್ರತಿಭಟನಾಕಾರರ ಕೈಯಲ್ಲಿದ್ದ ಗಣೇಶ ವಿಗ್ರಹವನ್ನು ಪೊಲೀಸರು ಪೊಲೀಸ್ ವಾಹನದಲ್ಲಿ ಇಟ್ಟುಕೊಂಡು ಹೋಗಿದ್ದರು. ಈ ಘಟನೆಯ ಕುರಿತು ಕುರುಕ್ಷೇತ್ರದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಕೂಡ ಕಿಡಿ ಕಾರಿದ್ದಾರೆ.

ಗಣೇಶ ಮೂರ್ತಿ ವಿಸರ್ಜನೆ ವೇಳೆ ಆದ ಗಲಭೆ, ಘರ್ಷಣೆಗಳ ಕುರಿತು ಬೇಸರ ವ್ಯಕ್ತಪಡಿಸಿದ ಮೋದಿ, ಕರ್ನಾಟಕದಲ್ಲಿ ಕಾಂಗ್ರೆಸ್‌ ಒಂದು ವರ್ಗದ ತುಷ್ಟೀಕರಣ ಮಾಡುತ್ತಿದೆ. ಕಾಂಗ್ರೆಸ್ ತುಷ್ಟೀಕರಣಕ್ಕಾಗಿ ಕೆಳಮಟ್ಟಕ್ಕೆ ಇಳಿಯಬಹುದು. ಇಂದು ಕರ್ನಾಟಕದಲ್ಲಿ ದೇವರು ಗಣಪತಿಯನ್ನೂ ಕಾಂಗ್ರೆಸ್ ಸರ್ಕಾರ ಕಂಬಿ ಹಿಂದೆ ಹಾಕಿದೆ ಎಂದು ಟೀಕಿಸಿದ್ದಾರೆ.

ಇಡೀ ದೇಶವೇ ಗಣಪತಿ ಉತ್ಸವ ಆಚರಿಸುವ ಸಂಭ್ರಮದಲ್ಲಿದ್ದಾರೆ. ಆದ್ರೆ ಕರ್ನಾಟಕದಲ್ಲಿ ವಿಘ್ನನಿವಾರಕರ ಪೂಜೆಗೂ ಕಾಂಗ್ರೆಸ್‌ ವಿಘ್ನ ಮಾಡುತ್ತಿದೆ ಎಂದು ಮೋದಿ ಅಸಮಾಧಾನ ಹೊರಹಾಕಿದ್ದಾರೆ.

ಹರಿಯಾಣ ವಿಧಾನಸಭೆ ಚುನಾವಣೆ ಹಿನ್ನೆಲೆ ಕುರುಕ್ಷೇತ್ರದಲ್ಲಿ ಚುನಾವಣೆ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ತಮ್ಮ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಅವಕಾಶ ನೀಡಿದ ಜನರು ಈಗ ಪಶ್ಚಾತ್ತಾಪ ಪಡುತ್ತಿದ್ದಾರೆ. ಕಾಂಗ್ರೆಸ್‌ನ ಸುಳ್ಳುಗಳು ಕರ್ನಾಟಕ ಮತ್ತು ತೆಲಂಗಾಣವನ್ನೂ ಬಿಟ್ಟಿಲ್ಲ. ಕರ್ನಾಟಕದಲ್ಲಿ ಸಾಕಷ್ಟು ಅವ್ಯವಸ್ಥೆ ಇದೆ ಎಂದ ಆಕ್ರೋಶ ವ್ಯಕ್ತಪಡಿಸಿದರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಲ್ಲಿಯ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ ಎಂದು ಹೇಳಿದರು.

- Advertisement -

Related news

error: Content is protected !!