Friday, May 17, 2024
spot_imgspot_img
spot_imgspot_img

ಹಿರಿಯ ಹಿರಿಯ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಹೃದಯಘಾತದಿಂದ ನಿಧನ…!

- Advertisement -G L Acharya panikkar
- Advertisement -

ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ, ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಸೇಡಿಯಾಪು ನಿವಾಸಿ ಗಂಗಾಧರ ಪುತ್ತೂರು (59) ಉಡುಪಿ ಜಿಲ್ಲೆಯ ಕೋಟದಲ್ಲಿ ವೇಷ ಕಳಚುತ್ತಿರುವಾಗ ಹೃದಯಘಾತದಿಂದ ನಿಧನ ಹೊಂದಿದ್ದಾರೆ.

ಸುಮಾರು 4 ದಶಕಗಳ ಕಾಲ ಯಕ್ಷ ರಂಗದಲ್ಲಿ ಸೇವೆ ಸಲ್ಲಿಸಿದ ಗಂಗಾಧರ ಪುತ್ತೂರು ಶ್ರೀ ಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ 42 ವರ್ಷ ತಿರುಗಾಟ ನಡೆಸುತ್ತಿದ್ದರು. ಬುಧವಾರ ಕೋಟ ಗಾಂಧಿ ಮೈದಾನದಲ್ಲಿ ನಡೆದ ಯಕ್ಷಗಾನದಲ್ಲಿ ಧರ್ಮಸ್ಥಳ ಕ್ಷೇತ್ರ ಮಹಾತ್ಮಿಯ ಕುಕ್ಕಿತ್ತಾಯನ ವೇಷ ನಿರ್ವಹಿಸಿ, ಚೌಕಿಗೆ ಮರಳಿ ಕಿರೀಟ ಆಭರಣಗಳನ್ನು ತೆಗೆದಿಟ್ಟು ಮುಖದ ಬಣ್ಣ ತೆಗೆಯುತ್ತಿರುವಾಗ ಅವರಿಗೆ ತೀವ್ರ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

ನಾರಾಯಣ ಮಯ್ಯ ಮತ್ತು ಲಕ್ಷ್ಮಿ ದಂಪತಿಯ ಪುತ್ರನಾಗಿ 1964ರಲ್ಲಿ ಸೇಡಿಯಾಪು ಮನೆಯಲ್ಲಿ ಜನಿಸಿದ ಅವರು, ಏಳನೇ ತರಗತಿವರೆಗೆ ವಿದ್ಯಾಭ್ಯಾಸ ಪಡೆದು, ನಂತರ ಕೆ.ಗೋವಿಂದ ಭಟ್, ಕರ್ಗಲ್ಲು ವಿಶ್ವೇಶ್ವರ ಭಟ್ ಅವರಲ್ಲಿ ನಾಟ್ಯಾಭ್ಯಾಸ ಕಲಿತರು. 18ನೇ ವಯಸ್ಸಿನಿಂದ ಮೇಳ ತಿರುಗಾಟ ಆರಂಭಿಸಿದ ಅವರು, ಸ್ತ್ರೀ ವೇಷ, ಪುಂಡು ವೇಷ, ರಾಜ ವೇಷ ನಿರ್ವಹಿಸುವ ಮೂಲಕ ಯಕ್ಷರಂಗದ ಸವ್ಯಸಾಚಿಯಾಗಿದ್ದರು.

ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿಣಿ, ಪ್ರಮೀಳೆ, ಶ್ರೀದೇವಿ, ಸೀತೆ, ದೇವೇಂದ್ರ, ದುಶ್ಯಾಸನ ಮೊದಲಾದ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ಹಾಸ್ಯದ ಸ್ತ್ರೀ ಪಾತ್ರಗಳನ್ನು ನಿರ್ವಹಿಸುವ ಪ್ರೌಢಿಮೆ ಕೂಡ ಅವರಲ್ಲಿತ್ತು.

- Advertisement -

Related news

error: Content is protected !!