- Advertisement -
- Advertisement -



ಗಂಗೊಳ್ಳಿ: ನಾಡಾ ಗ್ರಾಮ ಪಂಚಾಯತ್ ಸಮೀಪದ ನಾಡಾ ಶಾನ್ ಮೆಡಿಕಲ್ ಪಕ್ಕದಲ್ಲಿ ಮಲಗಿದ್ದ ದನಗಳನ್ನು ಕಾರಿಗೆ ತುಂಬಿ ಕಳವು ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಬಂಧಸಲಾಗಿದೆ.
ಬಂಧಿತರನ್ನು ಬ್ರಹ್ಮಾವರದ ಬೈಕಾಡಿಯ ಹೊನ್ನಾಳದ ನೌಫಲ್ (23) ಹಾಗೂ ಕುಂದಾಪುರ ಗುಲ್ವಾಡಿ ಮಾವಿನಕಟ್ಟೆಯ ನಿಶಾದ್ (23) ಎಂದು ಗುರುತಿಸಲಾಗಿದೆ.
ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಮಾರ್ಗದ ಪಕ್ಕದಲ್ಲಿ ಮಲಗಿದ್ದ ಜಾನುವಾರುಗಳನ್ನು ಕಾರಿಗೆ ಬಲವಂತವಾಗಿ ತುಂಬಲು ಪ್ರಯತ್ನಿಸಿದ್ದು, ಬೇರೆ ವಾಹನ ಬರುತ್ತಿರುವುದನ್ನು ನೋಡಿ ಬಳಿ ಇವರು ಓಡಿ ಹೋಗಿದ್ದರು ಎಂದು ಗಂಗೊಳ್ಳಿಯ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಪತ್ತೆಗಾಗಿ ಗಂಗೊಳ್ಳಿ ಪೊಲೀಸ್ ಠಾಣೆಯಿಂದ ವಿಶೇಷ ತಂಡ ರಚಿಸಿ ಜು.14ರಂದು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಬಿಳಿ ಬಣ್ಣದ ಸ್ವಿಫ್ಟ್ ಕಾರು ಹಾಗೂ ಎರಡು ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆ ಮುಂದುವರಿದಿದೆ.
- Advertisement -








