- Advertisement -
- Advertisement -



ಗಂಗೊಳ್ಳಿ: ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದಲ್ಲಿ ಅಲೆಗಳ ರಭಸಕ್ಕೆ ನೀರುಪಾಲಾದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಗಂಗೊಳ್ಳಿಯ ಮಡಿ ಲೈಟ್ ಹೌಸ್ ಬಳಿ ನಡೆದಿದೆ.
ನಾಪತ್ತೆಯಾದವರನ್ನು ರೋಹಿತ್ ಖಾರ್ವಿ(38), ಸುರೇಶ ಖಾರ್ವಿ(45) ಜಗನ್ನಾಥ್ ಖಾರ್ವಿ(43) ಎಂದು ಗುರುತಿಸಲಾಗಿದೆ. ಓರ್ವ ಮೀನುಗಾರ ಪಾರಾಗಿದ್ದಾನೆ.
ಸುರೇಶ ಖಾರ್ವಿ ಮಾಲಕತ್ವದ ದೋಣಿಯಲ್ಲಿ ಮಂಗಳವಾರ ಬೆಳಗ್ಗೆ ನಾಲ್ವರು ಮೀನುಗಾರರು ಮೀನುಗಾರಿಕೆ ಹೊರಟಿದ್ದರು. ಈ ವೇಳೆ ಅಲೆಗಳ ಅಬ್ಬರಕ್ಕೆ ಸಿಲುಕಿದ ದೋಣಿ ಮಗುಚಿ ಬಿದ್ದಿದೆ. ಈ ವೇಳೆ ಸಂತೋಷ್ ಖಾರ್ವಿ ಈಜಿ ಬೇರೊಂದು ದೋಣಿ ತಲುಪಿದ್ದರೆ, ಉಳಿದ ಮೂವರು ಮೀನುಗಾರರು ನಾಪತ್ತೆಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು, ಕರಾವಳಿ ಕಾವಲು ಪಡೆ ಪೊಲೀಸರು ಭೇಟಿ ನೀಡಿದ್ದು ಶೋಧ ಕಾರ್ಯ ನಡೆಸುತ್ತಿದ್ದಾರೆ.
- Advertisement -








