- Advertisement -
- Advertisement -



ಗಂಗೊಳ್ಳಿ: ಪಿಕಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೃತಪಟ್ಟ ಘಟನೆ ಮರವಂತೆ ಗ್ರಾಮದ ಸೀ ಲ್ಯಾಂಡ್ ಬಾರ್ ಆಂಡ್ ರೆಸ್ಟೋರೆಂಟ್ ಹತ್ತಿರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಯಳಜಿತ್ ಗ್ರಾಮದ ಬಾಬು ಎಂಬವರ ಪತ್ನಿ ಲಕ್ಷ್ಮೀ(45) ಎಂದು ಗುರುತಿಸಲಾಗಿದೆ.
ಕುಂದಾಪುರ-ಬೈಂದೂರು ಕಡೆಯ ಏಕಮುಖ ರಸ್ತೆಯಲ್ಲಿ ಪಿಕಪ್ ವಾಹನ ಅತೀ ವೇಗದಿಂದ ಬಂದು ಲಕ್ಷ್ಮೀ ಅವರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಲಕ್ಷ್ಮೀ ಕುಂದಾಪುರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -