Wednesday, April 24, 2024
spot_imgspot_img
spot_imgspot_img

ಪುತ್ತೂರು: ಅಕ್ರಮ ಗಾಂಜಾ ಸಾಗಾಟ ಆರೋಪಿಯ ಬಂಧನ

- Advertisement -G L Acharya panikkar
- Advertisement -

ಪುತ್ತೂರು : ತಾಲೂಕಿನ ನರಿಮೊಗ್ರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯ ತಿರುವಿನಲ್ಲಿ ಬೈಕ್ ಮೂಲಕ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಕಡಬ-ಸವಣೂರು ನಿವಾಸಿ ನವಾಜ್ (30) ಎಂಬಾತನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.

ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪುತ್ತೂರು ನಗರ ಠಾಣಾ ಎಸ್ಸೈ ಜಂಬೂರಾಜ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.

ದಾಳಿ ವೇಳೆ ಪೊಲೀಸರು ಆರೋಪಿಯ ವಶದಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮೌಲ್ಯದ 2 ಕೆಜಿ ಗಾಂಜಾ, ಬೈಕ್ ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಆರೋಪಿಯ ವಿರುದ್ದ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!