Saturday, July 25, 2026
spot_imgspot_img
spot_imgspot_img

ಕೋರ್ಟ್ ಮೆಟ್ಟಿಲೇರಿದ ಪ್ರಕರಣ; ಗರುಡ ಗಮನ ವೃಷಭ ವಾಹನ ಚಿತ್ರದ ಹಾಡಿನ ವಿವಾದ..!

- Advertisement -
- Advertisement -
vtv vitla
vtv vitla
vtv vitla
vtv vitla

ವಿವಾದಕ್ಕೆ ಕಾರಣವಾಗಿದ್ದ ಗರುಡ ಗಮನ ವೃಷಭ ವಾಹನ ಚಿತ್ರದಲ್ಲಿ ಬರುವ ಮಹದೇಶ್ವರನ ಸೋಜುಗಾದ ಸೂಜುಮಲ್ಲಿಗೆ ಹಾಡು ಇದೀಗ ನ್ಯಾಯಾಲಯದ ಮೆಟ್ಟಿಲೇರಿದೆ. ಈ ಮೂಲಕ ಚಿತ್ರತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ.

vtv vitla

ಸದ್ಯ ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಆಗಿರವ ರಾಜ್ ಬಿ ಶೆಟ್ಟಿ ನಿರ್ದೇಶನದ ‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ಕ್ರೌರ್ಯ ಮೆರೆಯುವ ದೃಶ್ಯವಿದ್ದು, ಅದಕ್ಕೆ ಮಹದೇಶ್ವರನ `ಸೋಜುಗಾದ ಸೂಜುಮಲ್ಲಿಗೆ’ ಜನಪದ ಹಾಡು ಬಳಕೆ ಮಾಡಲಾಗಿತ್ತು. ಈ ಹಿನ್ನೆಲೆ ಚಿತ್ರದ ವಿರುದ್ಧ ಸುವರ್ಣ ಕರ್ನಾಟಕ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ವಿಜಯ್‍ಕುಮಾರ್ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಮೊಕದ್ದಮೆ ದಾಖಲಿಸಿದ್ದರು.

ವಿಜಯ್‍ಕುಮಾರ್ ಅವರ ಈ ಅರ್ಜಿಯಲ್ಲಿ, ಚಿತ್ರದಲ್ಲಿ ಮಹದೇಶ್ವರನ ಹಾಡು ತೆಗೆಯಬೇಕು ಇಲ್ಲವೇ, ಮ್ಯೂಟ್ ಮಾಡಬೇಕು ಎಂದು ಸೂಚಿಸಲಾಗಿದೆ. ಅದು ಅಲ್ಲದೇ ಅವರು ಚಿತ್ರದ ನಿರ್ದೇಶಕ ರಾಜ್ ಬಿ.ಶೆಟ್ಟಿ, ನಟ ರಿಷಬ್ ಶೆಟ್ಟಿ, ನಿರ್ಮಾಪಕರಾದ ರವಿ ರೈ.ಬಿ.ವಿ, ವಚನಶೆಟ್ಟಿ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!