Monday, July 20, 2026
spot_imgspot_img
spot_imgspot_img

ಗ್ಯಾಸ್ ಸಿಲಿಂಡರ್ ಸ್ಫೋಟ : ತಾಯಿ-ಮಗನಿಗೆ ಗಂಭೀರ

- Advertisement -
- Advertisement -

ಬಾಗಲಕೋಟೆ: ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ತೇರದಾಳ ಪಟ್ಟಣದ ಡಚ್ ಕಾಲೋನಿಯ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತಾಯಿ ಹಾಗೂ ಮಗ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಮನೆಯೊಂದರಲ್ಲಿ ಸಂಭವಿಸಿದ ಈ ಸ್ಫೋಟದಿಂದಾಗಿ ಮನೆಯ ಗೋಡೆಗಳು ಜಖಂಗೊಂಡು ಅಪಾರ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ವೇಳೆ ಮನೆಯಲ್ಲಿ ಇದ್ದ ತಾಯಿ ಮತ್ತು ಮಗ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ತೇರದಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!