Friday, June 5, 2026
spot_imgspot_img
spot_imgspot_img

ಗ್ಯಾಸ್ ಗೀಸರ್‌ ಸೋರಿಕೆ; ಪ್ರಜ್ಞೆ ತಪ್ಪಿ ಬಿದ್ದು ಯುವತಿ ಸಾವು..!

- Advertisement -
- Advertisement -

ಗ್ಯಾಸ್ ಗೀಸರ್‌ ಸೋರಿಕೆಯಾಗಿ ಮತ್ತೊಂದು ಅನಾಹುತ ಸಂಭವಿಸಿದೆ. ಗ್ಯಾಸ್ ಗೀಸರ್‌ನಿಂದ ಸೋರಿಕೆಯಾದ ವಿಷ ಅನಿಲದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಮೃತಪಟ್ಟ ಯುವತಿ 23 ವರ್ಷದ ರಾಜೇಶ್ವಚರಿ ಎಂದು ಗುರುತಿಸಲಾಗಿದೆ.

ಕಾಮಾಕ್ಷಿಪಾಳ್ಯದ ಮೀನಾಕ್ಷಿ ನಗರದಲ್ಲಿ ಈ ದುರ್ಘಟನೆ ಸಂಭವಿಸಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ರಾಜೇಶ್ವರಿ ತನ್ನ ಅಣ್ಣನ ಮದುವೆ ಸಮಾರಂಭದ ಹಿನ್ನೆಲೆಯಲ್ಲಿ ರಜೆ ಹಾಕಿದ್ದಳು. ಸ್ನಾನ ಮಾಡಲು ಹೋಗಿದ್ದ ವೇಳೆ ಈ ಅವಘಡ ಸಂಭವಿಸಿದೆ. ಮೃತ ರಾಜೇಶ್ವರಿ ಗ್ಯಾಸ್ ಗೀಸರ್‌ನಿಂದ ಸೋರಿಕೆಯಾದ ವಿಷ ಅನಿಲದಿಂದ ಪ್ರಜ್ಞೆತಪ್ಪಿದ್ದಾಳೆ ಎನ್ನಲಾಗಿದೆ. ವಿಷಯ ತಿಳಿದ ಕುಟುಂಬಸ್ಥರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು ಏನು ಪ್ರಯೋಜನವಾಗಿಲ್ಲ. ಈ ಘಟನೆಯ ಬಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!