Friday, October 2, 2026
spot_imgspot_img
spot_imgspot_img

ಡಿವೈಡರ್ ಗೆ ಡಿಕ್ಕಿ ಹೊಡೆದು ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ ಪಲ್ಟಿ !

- Advertisement -
- Advertisement -

ಕಾಪು: ಪಾಂಗಳ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮುಂಜಾನೆ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಘಟನೆ ನಡೆದಿದೆ.

ಶಿಕಾರಿಪುರದಿಂದ ಮಂಗಳೂರಿಗೆ ಖಾಲಿ ಗ್ಯಾಸ್ ಸಿಲಿಂಡರ್ ಗಳನ್ನು ಹೊತ್ತು ಸಾಗುತ್ತಿದ್ದ ಲಾರಿಯು ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ನಡುವಿನ ಡಿವೈಡರ್ ಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಲಾರಿ ಹೆದ್ದಾರಿ ಮಧ್ಯೆ ಉರುಳಿ ಬಿದ್ದಿದೆ.

ಅಪಘಾತ ದಿಂದ ಗಾಯಗೊಂಡಿರುವ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!